Select Your Language

Notifications

webdunia
webdunia
webdunia
webdunia

ವೋಟ್ ಬ್ಯಾಂಕ್‌ಗಾಗಿ ಸರಕಾರದಿಂದ ಟಿಪ್ಪು ಜಯಂತಿ ಆಚರಣೆ: ಶೆಟ್ಟರ್

ವೋಟ್ ಬ್ಯಾಂಕ್‌ಗಾಗಿ ಸರಕಾರದಿಂದ ಟಿಪ್ಪು ಜಯಂತಿ ಆಚರಣೆ: ಶೆಟ್ಟರ್
ಬೆಂಗಳೂರು , ಬುಧವಾರ, 19 ಅಕ್ಟೋಬರ್ 2016 (14:21 IST)
ಟಿಪ್ಪು ಸುಲ್ತಾನ್ ಜಯಂತಿ ಆಚರಿಸಿ ಎಂದು ಮುಸ್ಲಿಂರು ಹೇಳಿಲ್ಲ. ಏಕೆಂದರೆ ಇಸ್ಲಾಂ ಧರ್ಮದಲ್ಲಿ ವ್ಯಕ್ತಿ ಪೂಜೆ ನಿಷಿದ್ಧ. ಆದರೂ ವೋಟ್ ಬ್ಯಾಂಕ್‌ಗಾಗಿ ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಿಸಲು ಮುಂದಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೋಟ್ ಬ್ಯಾಂಕ್‌ಗಾಗಿ ರಾಜ್ಯ ಸರಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವ ಹುನ್ನಾರ ನಡೆಸುತ್ತಿದೆ. ಕಳೆದ ವರ್ಷ ಟಿಪ್ಪು ಸುಲ್ತಾನ್ ಜಯಂತಿ ವೇಳೆ ಮಡಿಕೇರಿಯಲ್ಲಿ ಕುಟ್ಟಪ್ಪನವರ ಕೊಲೆಯಾಯಿತು. ಕೇರಳದಿಂದ 2 ಸಾವಿರ ಗೂಂಡಾಗಳು ಆಯುಧಗಳ ಸಮೇತ ರಾಜ್ಯಕ್ಕೆ ಆಗಮಿಸಿದ್ದರು. ಟಿಪ್ಪು ಜಯಂತಿಯಿಂದ ರಾಜ್ಯ ಸರಕಾರಕ್ಕೆ ಇನ್ನೇಷ್ಟು ಬಲಿ ಬೇಕು ಎಂದು ಪ್ರಶ್ನಿಸಿದರು. 
 
ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಜಾರ್ಜ್ ಬೇಕು. ಏಕೆಂದರೇ ಜಾರ್ಜ್ ಎಟಿಎಂ ಇದ್ದಂತೆ ಎಂದು ಲೇವಡಿ ಮಾಡಿದರು. 
 
ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ.......
 
ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 8 ಗಂಟೆಯಲ್ಲಿ ಆರೋಪಿಗಳನ್ನು ಪತ್ತೆ ಮಾಡುತ್ತೇವೆ ಎಂದು ಪೊಲೀಸ್ ಆಯುಕ್ತ ಮೇಘರಿಕ್ ಹೇಳಿದ್ದರು. ಆದರೆ, 3 ಬಾರಿ 8 ಗಂಟೆ ಕಳೆದರೂ ಇನ್ನೂ ಆರೋಪಿಗಳನ್ನು ಬಂಧಿಸಿಲ್ಲ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಿರಿತನದ ಆಧಾರದ ಮೇಲೆ ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ: ರಾಮಲಿಂಗಾರೆಡ್ಡಿ