Publish Date: Wed, 20 Jul 2016 (18:28 IST)
Updated Date: Mon, 30 Dec 2019 (12:35 IST)
ಮಹದಾಯಿ ನದಿ ಜೋಡಣೆ ವಿಚಾರ ಕುರಿತು ಬಫರ್ ಜೋನ್ ಆರೋಪ ಹಿನ್ನೆಲೆಯಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ಸರಕಾರ ಬದ್ಧವಾಗಿದೆ ಎಂದು ಅರಣ್ಯ ಇಲಾಖೆ ಸಚಿವ ರಮಾನಾಥ್ ರೈ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರಣ್ಯ ಇಲಾಖೆ ಸಚಿವ ರಮಾನಾಥ ರೈ, ಮಹದಾಯಿ ನದಿ ಜೋಡಣೆ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ, ರಾಜ್ಯ ಸರಕಾರಕ್ಕೆ ಜನರ ಹಿತ ಮುಖ್ಯವೆಂದು ತಿಳಿಸಿದರು.
ಅರಣ್ಯ ಹಾಗೂ ವನ್ಯ ಜೀವಿಗಳ ಅಭಿವೃದ್ಧಿಯಲ್ಲಿ ಕರ್ನಾಟಕ ರಾಜ್ಯ ನಂಬರ್ ಓನ್ ಸ್ಥಾನದಲ್ಲಿದೆ ಎಂದು ತಿಳಿಸಿದರು.
ಅರಣ್ಯ ಇಲಾಖೆಗೆ 2000 ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಅರಣ್ಯ ಹಾಗೂ ವನ್ಯ ಜೀವಿಗಳ ರಕ್ಷಣಾ ಸಿಬ್ಬಂದಿಗಳಿಗೆ ಎರಡು ಸಾವಿರ ರೂಪಾಯಿ ಭತ್ಯೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಸಚಿವ ರಮಾನಾಥ ರೈ ತಿಳಿಸಿದ್ದಾರೆ.