Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ತೆರವಿಗೆ ಸರ್ಕಾರ ಚಿಂತನೆ

webdunia
ಬುಧವಾರ, 1 ಸೆಪ್ಟಂಬರ್ 2021 (11:58 IST)
ಹುಬ್ಬಳ್ಳಿ, (ಸೆ.1) : ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಏರಿಕೆ ಇರುವುದರಿಂದ ರಾತ್ರಿ ಕಫ್ರ್ಯೂ ವಿಧಿಸಲಾಗಿದೆ. ಇದನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಜನರ ಜೀವನಕ್ಕೂ ತೊಂದರೆಯಾಗಬಾರದು. ಕೋವಿಡ್ ನಿಯಂತ್ರಣಕ್ಕೂ ಬರಬೇಕು. ಈ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ನೀಡುವ ವರದಿ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು. ಕಟ್ಟೆಚ್ಚರ: ಕರಾವಳಿ ತೀರ ಪ್ರದೇಶ ಹಾಗೂ ಹೆಚ್ಚು ಅರಣ್ಯ ಪ್ರದೇಶವಿರುವ ಕಡೆ ಕೇರಳದಿಂದ ಕೆಲವು ಉಗ್ರಗಾಮಿ ಸಂಘಟನೆಗೆ ಸೇರಿದ ಶಂಕಿತರು ಬಂದಿರಬಹುದೆಂಬ ಹಿನ್ನೆಲೆಯಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ಸ್ಥಳೀಯ ಪೊಲೀಸರು ರಾಷ್ಟ್ರೀಯ ತನಿಖಾ ದಳಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ವಿಶೇಷವಾಗಿ ಕೇರಳದಿಂದ ಬರುವವರ ಮೇಲೆ ನಿಗಾ ವಹಿಸಲಾಗಿದೆ. ಅದರಲ್ಲೂ ಕರಾವಳಿ ತೀರ ಪ್ರದೇಶ ಹಾಗೂ ಹೆಚ್ಚು ಅರಣ್ಯ ಪ್ರದೇಶವಿರುವ ಕಡೆ ಅನುಮಾನಾಸ್ಪದವಾಗಿ ತಿರುಗಾಡುವವರ ಮೇಲೆ ನಿಗಾ ವಹಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ನಾಳೆ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ಹುಬ್ಬಳ್ಳಿಗೆ ಬರಲಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುವರು. ದಾವಣಗೆರೆ ಜಿಲ್ಲೆ, ಹರಿಹರದ ಕೊಂಡಜ್ಜಿ ಬಳಿ ಪೊಲೀಸ್ ತರಬೇತಿ ಶಾಲೆಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು. ಅಮಿತ್ ಷಾ ಅವರ ಜತೆ ಇನ್ನೂ ಕೆಲವು ಕೇಂದ್ರ ಸಚಿವರು ಆಗಮಿಸಲಿದ್ದಾರೆ. ರಾಜ್ಯದ ಯೋಜನೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ಮಾಡಲಿದ್ದೇವೆ ಎಂದು ಸಿಎಂ ತಿಳಿಸಿದರು.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಫಿರೋಝಾಬಾದ್ನಲ್ಲಿ 10 ದಿನಗಳಲ್ಲಿ 45 ಮಕ್ಕಳು ಮೃತ್ಯು: ಡೆಂಗ್ಯೂ ಶಂಕೆ