Publish Date: Tue, 28 Feb 2023 (20:42 IST)
Updated Date: Tue, 28 Feb 2023 (20:44 IST)
7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರಿ ನೌಕರರು ಪಟ್ಟು ಹಿಡಿದಿದ್ದು, ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹೇಳಿದ್ದಾರೆ. ಅದರಂತೆ ನಾಳೆ ರಾಜ್ಯಾದ್ಯಂತ ನೌಕರರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರೊಂದಿಗಿನ ಸಭೆಯ ನಂತರವೂ 7ನೇ ವೇತನ ಆಯೋಗದ ವರದಿ ಜಾರಿಗೆ ಪಟ್ಟು ಹಿಡಿದಿರುವ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಮುಂದುವರಿಸಲು ನಿರ್ಧರಿಸಿದ್ದಾರೆ. ಮುಷ್ಕರದಿಂದ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಸರ್ಕಾರ ಯಾವಾಗ ಸಭೆಗೆ ಕರೆದರೂ ಭಾಗವಹಿಸುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಕ್ಷರಿ ಹೇಳಿದ್ದಾರೆ.