Publish Date: Wed, 12 Feb 2020 (16:09 IST)
Updated Date: Wed, 12 Feb 2020 (16:10 IST)
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಫೆಬ್ರವರಿ 13ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ಸರ್ಕಾರಿ ನೌಕರರ ಸಂಘದ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಆ ಸಭೆಯಲ್ಲಿ ಕರ್ನಾಟಕ ಬಂದ್ ಬೆಂಬಲಿಸಬೇಕೆ? ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುತ್ತೇವೆ. ಹೀಗಂತ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ಪಷ್ಟಪಡಿಸಿದ್ದಾರೆ.
ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿದೆ. ಕ್ಯಾಬ್ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಓಲಾ ಉಬರ್ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಹೇಳಿದ್ದಾರೆ.
ಅಂಬೇಡ್ಕರ್ ಸೇನೆ, ಜಯಕರ್ನಾಟಕ ಸೇರಿದಂತೆ ಸುಮಾರು 600 ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಹಲವು ಸಂಘಟನೆಗಳು ಬಂದ್ ಗೆ ಬೆಂಬಲಿಸಿಲ್ಲ.