Select Your Language

Notifications

webdunia
webdunia
webdunia
webdunia

ಸರಕಾರದ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣಗಳಲ್ಲಿ ಹೆಚ್ಚಳ: ಶೆಟ್ಟರ್

ಸರಕಾರದ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣಗಳಲ್ಲಿ ಹೆಚ್ಚಳ: ಶೆಟ್ಟರ್
ಹುಬ್ಬಳ್ಳಿ , ಶುಕ್ರವಾರ, 22 ಜುಲೈ 2016 (15:09 IST)
ಸರಕಾರ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ಸರಕಾರ ಯಾವ ದಿಕ್ಕಿನತ್ತ ಸಾಗುತ್ತಿದೆ ಎ್ನುವುದು ತಿಳಿಯುತ್ತಿಲ್ಲವೆಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳದಿಂದ ರಾಜ್ಯದಲ್ಲಿ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸ್ ಅಧಿಕಾರಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.
 
ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಜನ ಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಸಿಐಡಿ, ನ್ಯಾಯಾಂಗ ತನಿಖೆ ಪ್ರಗತಿ ಕುರಿತು ಯಾವುದೇ ಸ್ಪಷ್ಟನೆ ದೊರೆತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ.ಎಂ.ಪ್ರಸಾದ್ ಹಾಗೂ ಪ್ರೊನಬ್ ಮೊಹಾಂತಿ ಅವರನ್ನು ಅಮಾನತು ಮಾಡಬೇಕು. ಅಲ್ಲದೆ, ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲೇ ಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ ಭಗವಂತ್ ಮಾನ್ ವಿರುದ್ಧ ಕಠಿಣ ಕ್ರಮ: ಸುಮಿತ್ರಾ ಮಹಾಜನ್