Select Your Language

Notifications

webdunia
webdunia
webdunia
webdunia

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲ-ಬೊಮ್ಮಾಯಿ

ಬೊಮ್ಮಾಯಿ
ಶಿವಮೊಗ್ಗ , ಸೋಮವಾರ, 2 ಅಕ್ಟೋಬರ್ 2023 (17:00 IST)
ರಾಜ್ಯದಲ್ಲಿ ಶಿವಮೊಗ್ಗ ಹಾಗೂ ಕೋಲಾರದಲ್ಲಿ ಧಾರ್ಮಿಕ ಸಂಘರ್ಷದ ಘಟನೆಗಳು ನಡೆಯುತ್ತಿವೆ. ಆದರೂ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಪ್ರಕ್ಷುಬ್ಧ ವಾತಾವರಣ ಇರುವ ನಗರವಾಗಿದೆ. ಅಲ್ಲಿ ಹಿಂದೆ ಹಲವಾರು ಘಟನೆ ನಡೆದಿದೆ. ಇಂತ ಧಾರ್ಮಿಕ ಘಟನೆ ನಡೆದಾಗ ಪೊಲೀಸರು ಸೂಕ್ತ ಮುಂಜಾಗ್ರತ ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. ಶಿವಮೊಗ್ಗದ 3 ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಇಂತ ಘಟನೆ ನಡೆಯುತ್ತದೆ. ಇಂತ ಸ್ಟೇಷನ್‌ಗೆ ವರ್ಗಾವಣೆ ಮಾಡುವಾಗ ಸಮರ್ಥ ಅಧಿಕಾರಿ ಹಾಕಬೇಕು ಅಂತಾ ಸರ್ಕಾರಕ್ಕೆ ಆಗ್ರಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಖರ್ಗೆ ಅಳಿಯ ರಾಧಾಕೃಷ್ಣ ಲೋಕಸಭೆಗೆ ಸ್ಪರ್ಧೆ-ಚಿಂಚನಸೂರು