Webdunia - Bharat's app for daily news and videos

Install App

ಮದ್ಯ ನಿಷೇಧಿಸುವ ಯೋಚನೆ ಸರಕಾರದ ಮುಂದಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 20 ನವೆಂಬರ್ 2017 (14:06 IST)
ಮುಂದಿನ ವರ್ಷ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಗೆ ತರುವ ವರದಿಗಳನ್ನು ಸಿಎಂ ಸಿದ್ದರಾಮಯ್ಯ ತಳ್ಳಿಹಾಕಿದ್ದಾರೆ.
 
"ಪ್ರಸ್ತುತ ಆರ್ಥಿಕ ವರ್ಷದಲ್ಲಿ ಮದ್ಯ ನಿಷೇಧವನ್ನು ಸರಕಾರ ಪರಿಗಣಿಸುವುದಿಲ್ಲ, ಏಕೆಂದರೆ ಇಂತಹ ನಿಷೇಧಕ್ಕೆ ಸಾಕಷ್ಟು ಸಿದ್ದತೆ ಬೇಕು. ಕರ್ನಾಟಕದಿಂದ ಇತ್ತೀಚೆಗೆ ಅಧಿಕಾರಿಗಳ ತಂಡವನ್ನು ಬಿಹಾರಕ್ಕೆ ಕಳುಹಿಸಿದ್ದು, ಮದ್ಯ ನಿಷೇಧದ ಪರಿಣಾಮಕಾರಿತ್ವವನ್ನು ಅಧ್ಯಯನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
 
ಮಹಿಳಾ ಮತದಾರರನ್ನು ಪ್ರೇರೇಪಿಸಲು ಕರ್ನಾಟಕದಲ್ಲಿ ನಿಷೇಧವನ್ನು ಜಾರಿಗೊಳಿಸಲಾಗುವುದು ಎನ್ನುವ ವರದಿಗಳನ್ನು ತಳ್ಳಿಹಾಕಿದ ಅಬಕಾರಿ ಅಧಿಕಾರಿಗಳು,.ಕರ್ನಾಟಕದ ಪ್ರಮುಖ ಆದಾಯವು ಮದ್ಯ ಮಾರಾಟದಿಂದ ಬರುವುದರಿಂದ ಸರಕಾರ ಮದ್ಯ ಮಾರಾಟ ನಿಷೇಧಿಸಲು ಸಾಧ್ಯವಿಲ್ಲ. ವಿಶೇಷವಾಗಿ ರೆರಾ ಮತ್ತು ಜಿಎಸ್‌ಟಿ ಅನುಷ್ಠಾನದ ನಂತರ ಆದಾಯ ಸಂಗ್ರಹವು ಕುಸಿದಿರುವ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸುವ ಬಗ್ಗೆ ಸರಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ವೈದ್ಯಕೀಯ ಮಸೂದೆ ಜಾರಿಗೆ ತಂದು ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಸರಕಾರ ಪ್ರಯತ್ನಿಸುತ್ತಿದೆ ಎನ್ನುವ  ಆರೋಪಗಳಿಗೆ ಉತ್ತರಿಸಿದ ಸಿಎಂ,  ಬಿಲ್, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸಲು ಉದ್ದೇಶಿಸಿಲ್ಲ ಆದರೆ. ಬಡವರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ದೊರೆಯಲಿ ಎನ್ನುವ ಉದ್ದೇಶ ಸರಕಾರ ಹೊಂದಿದೆ ಎಂದು ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments