ಕಪ್ಪತಗುಡ್ಡ ವಿಚಾರದಲ್ಲಿ ರಾಜ್ಯ ಸರಕಾರ ತೆಗೆದುಕೊಂಡಿರುವ ನಿರ್ಧಾರ ತಪ್ಪು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.
ಗದಗ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪತಗುಡ್ಡ ವಿಚಾರದಲ್ಲಿ ತೋಂಟದಾರ್ಯ ಶ್ರೀಗಳು ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಪಕ್ಷದ ಬೆಂಬಲ ಇದೆ. ಯಾವುದೇ ಕಾರಣಕ್ಕೂ ಖನಿಜ ಸಂಪನ್ಮೂಲವನ್ನು ಲೂಟಿ ಹೊಡೆಯಲು ಬಿಡಬಾರದು ಎಂದು ಕಿಡಿಕಾರಿದರು.
ಅವಶ್ಯಕತೆ ಬಿದ್ದರೆ ಕಪ್ಪತಗುಡ್ಡ ಹೋರಾಟದಲ್ಲಿ ತಾವು ಭಾಗಿಯಾಗುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಎಚ್ಚರಿಕೆ ನೀಡಿದ್ದಾರೆ.
ಕಪ್ಪತಗುಡ್ಡ ಹೋರಾಟದ ನೇತೃತ್ವ ವಹಿಸಿರುವ ತೋಂಟದ ಶ್ರೀ ಶಿದ್ಧಲಿಂಗ ಮಹಾಸ್ವಾಮಿಗಳು, ಸಂರಕ್ಷಿತ ಪ್ರದೇಶ ಸ್ಥಾನಮಾನ ಸಿಗದಿದ್ದಲ್ ಹೋರಾಟ ಅನಿವಾರ್ಯ ಎಂದು ರಾಜ್ಯ ಸರಕಾರಕ್ಕೆ ಬಹಿರಂಗ ಎಚ್ಚರಿಕೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ