ಬೆಂಗಳೂರು: ಕರ್ನಾಟಕದ ಧೀಮಂತ ರಾಜಕಾರಣಿ, ಮಾಜಿ ಸಿಎಂ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ಅವರು ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆಗೆ ಘೋಷಣೆ ಮಾಡಿದೆ. ನಾಳೆ ರಾಜ್ಯಾದಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.
ನಾಳೆ ಖಾಸಗಿ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಎಸ್‌ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್‌ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.