Select Your Language

Notifications

webdunia
webdunia
webdunia
webdunia

ಎಸ್ಮಾ ಕಾಯ್ದೆ ಜಾರಿಗೆ ಸರಕಾರ ಚಿಂತನೆ ನಡೆಸಿಲ್ಲ: ಸಿಎಂ ಸಿದ್ದರಾಮಯ್ಯ

ಎಸ್ಮಾ ಕಾಯ್ದೆ ಜಾರಿಗೆ ಸರಕಾರ ಚಿಂತನೆ ನಡೆಸಿಲ್ಲ:  ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 25 ಜುಲೈ 2016 (13:10 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಕೈಗೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಎಸ್ಮಾ ಕಾಯ್ದೆ ಜಾರಿ ಮಾಡುವ ಕುರಿತು ಸರಕಾರ ಚಿಂತನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನವನ್ನು 10 ಪ್ರತಿಶತ ಹೆಚ್ಚಳ ಮಾಡುವುದಾಗಿ ಭರವಸೆ ನೀಡಿದ್ದೇವೆ. ಆದರೆ, ಅವರು 35 ಪ್ರತಿಶತ ಹೆಚ್ಚಳ ಮಾಡುವಂತೆ ಒತ್ತಾಯಿಸುತ್ತಿವೆ. ಸಾರಿಗೆ ನೌಕರರ ಬೇಡಿಕೆಯಂತೆ ವೇತನವನ್ನು ಹೆಚ್ಚಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಯಾವ ಸರಕಾರವು ಸಾರಿಗೆ ನೌಕರರ ವೇತನವನ್ನು 10ರಷ್ಟು ವೇತನವನ್ನು ಹೆಚ್ಚಳ ಮಾಡಿಲ್ಲ. ಈ ಹಿಂದಿನ ಸರಕಾರಗಳು ಸಾರಿಗೆ ನೌಕರರ ವೇತನವನ್ನು 5 ರಿಂದ 6 ಪ್ರತಿಶತ ಮಾತ್ರ ಹೆಚ್ಚಳ ಮಾಡಿದ್ದವು. ಆದರೆ, ನಾವು 10 ಪ್ರತಿಶತ ಹೆಚ್ಚಳ ಮಾಡುವುದಾಗಿ ತಿಳಿಸಿದ್ದೇವೆ ಎಂದು ಹೇಳಿದರು.
 
ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ನೌಕರರ ಸಂಘದೊಂದಿಗೆ ಚರ್ಚೆ ನಡೆಸಲು ಸರಕಾರ ಸಿದ್ದವಿದೆ. ರಾಜ್ಯ ಸಾರಿಗೆ ನೌಕರರ ತಕ್ಷಣವೇ ಮುಷ್ಕರವನ್ನು ಕೈಬಿಟ್ಟು, ಕೆಲಸಕ್ಕೆ ಹಾಜರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಾಹುಬಲಕ್ಕಿಂತ ಭಾವಬಲ ದೊಡ್ಡದು : ರಾಘವೇಶ್ವರಶ್ರೀ