Select Your Language

Notifications

webdunia
webdunia
webdunia
webdunia

ಕನ್ನಡ ಕಡ್ಡಾಯ ನೀತಿಯನ್ನು ಸಮರ್ಥಿಸಿಕೊಂಡ ಕರ್ನಾಟಕ ಸರ್ಕಾರ

ಕನ್ನಡ ಕಡ್ಡಾಯ ನೀತಿಯನ್ನು ಸಮರ್ಥಿಸಿಕೊಂಡ ಕರ್ನಾಟಕ ಸರ್ಕಾರ
ಬೆಂಗಳೂರು , ಸೋಮವಾರ, 15 ನವೆಂಬರ್ 2021 (20:01 IST)
ಬೆಂಗಳೂರು : ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರವಾಗಿ ಕನ್ನಡ ಕಡ್ಡಾಯ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಸಲಾಗಿದೆ.
ಈ ವೇಳೆ, ಕನ್ನಡ ಕಡ್ಡಾಯ ನೀತಿಯನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಕನ್ನಡ ಬರದವರಿಗೆ ಪ್ರತ್ಯೇಕ ಪಠ್ಯಕ್ರಮ ರೂಪಿಸಲಾಗಿದೆ. ಕನಿಷ್ಠ ವ್ಯವಹಾರಿಕ ಕನ್ನಡ ಕಲಿಸಲು ಯತ್ನಿಸಲಾಗಿದೆ. ಯಾವುದೇ ವಿದ್ಯಾರ್ಥಿಗಳು ಕನ್ನಡ ಕಡ್ಡಾಯ ಪ್ರಶ್ನಿಸಿಲ್ಲ. ಅರ್ಜಿದಾರರು ವೈಯಕ್ತಿಕ ಹಿತಾಸಕ್ತಿ ಹೊಂದಿದ್ದಾರೆ. ಇತರೆ ಭಾಷೆ ಶಿಕ್ಷಕರ ವೈಯಕ್ತಿಕ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಗಣಿಸದಂತೆ ಸರ್ಕಾರಕ್ಕೆ ಎಜಿ ಹೈಕೋರ್ಟ್ನಲ್ಲಿ ಎಜಿ ಪ್ರಭುಲಿಂಗ್ ನಾವದಗಿ ಮನವಿ ಸಲ್ಲಿಸಿದ್ದಾರೆ. ಸರ್ಕಾರದ ನೀತಿ ನಿರೂಪಣೆಯಲ್ಲಿ ಮಧ್ಯಪ್ರವೇಶಿಸುವಂತಿಲ್ಲ. ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ವಿಚಾರದಲ್ಲೂ ಇದೇ ಪ್ರಶ್ನೆ ಇದೆ. ಸುಪ್ರೀಂಕೋರ್ಟ್ ಮಧ್ಯಪ್ರವೇಶ ನಿರಾಕರಿಸಿತ್ತು ಎಂದು ಅವರು ವಾದ ಮಂಡಿಸಿದ್ದಾರೆ.
ಅರ್ಜಿದಾರ ಸಂಸ್ಕೃತ ಭಾರತಿ ಟ್ರಸ್ಟ್ ಪರ ವಕೀಲರು ವಾದ ಮಂಡಿಸಿದ್ದಾರೆ. ಸರ್ಕಾರದ ಕ್ರಮ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಷ್ಟ. ಪ್ರತ್ಯೇಕ ಶಿಕ್ಷಕರು, ಗ್ರಂಥಾಲಯ, ಪುಸ್ತಕ ಒದಗಿಸಬೇಕು. ಕನ್ನಡ ಒತ್ತಾಯಪೂರ್ವಕವಾಗಿ ಪ್ರೀತಿಸುವಂತೆ ಮಾಡುತ್ತಿದೆ. ಕರ್ನಾಟಕದಲ್ಲೇ ಬೇರೆ ಮಾಧ್ಯಮದ ವಿದ್ಯಾರ್ಥಿಗಳಿದ್ದಾರೆ. ಆ ವಿದ್ಯಾರ್ಥಿಗಳಿಗೆ ಸರ್ಕಾರದ ನೀತಿಯಿಂದ ತೊಂದ್ರೆ ಆಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾರೆ. ಕ್ರಿಯಾತ್ಮಕ ಕನ್ನಡದ ಪಠ್ಯಕ್ರಮ ಕ್ಲಿಷ್ಟಕರವಾಗಿದೆ. ಭಾಷೆ ಆಯ್ಕೆಯಾಗಿ ಕಲಿಸಬೇಕು, ಕಡ್ಡಾಯಗೊಳಿಸಬಾರದು ಎಂದು ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಎಸ್. ನಾಗಾನಂದ್ ವಾದ ಮಂಡಿಸಿದ್ದಾರೆ.
ಕನ್ನಡ ಪ್ರೋತ್ಸಾಹದ ಹೆಸರಲ್ಲಿ ಕಡ್ಡಾಯಗೊಳಿಸುವುದು ಸರಿಯೇ? ಎಂದು ಹೈಕೋರ್ಟ್ ಕೇಂದ್ರ ಸರ್ಕಾರದ ನಿಲುವು ಕೇಳಿದೆ. ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಕಾಲಾವಕಾಶ ಕೋರಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಲು ನಿರಾಕರಿಸಿದ ಯುವತಿಗೆ ಬೆಂಕಿ ಹಚ್ಚಿದ ಪ್ರೇಮಿ!