ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ. ಆದರೆ ಇಡೀ ಸಂಸ್ಥೆಯನ್ನೇ ಹೊಣೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಮ್ನೆಸ್ಟಿ ಸಂಸ್ಥೆ ಪರ ಬ್ಯಾಟಿಂಗ್ ಬೀಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯಾರೋ ಕೆಲವರು ದೇಶ ವಿರೋಧಿ ಘೋಷಣೆ ಕೂಗಿರಬಹುದು. ಪ್ರಕರಣ ಕುರಿತು ತನಿಖೆಯ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ಹೇಳಿದರು.
ಆರ್‌ಎಸ್‌ಎಸ್ ಹಾಗೂ ಎಬಿವಿಪಿ ಸಂಘಟನೆಗಳು ಸಮಸ್ಯೆಗಳನ್ನು ಸೃಷ್ಟಿಮಾಡುತ್ತಿವೆ. ಸಮಸ್ಯೆ ಸೃಷ್ಟಿ ಮಾಡಲೆಂದು ಈ ಎರಡು ಸಂಘಟನೆ ಹುಟ್ಟಿಗೊಂಡಿರುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತರ ಮೇಲೆ ಹಲ್ಲೆ......
ದೇಶದ ವಿವಿಧೆಡೆ ದಲಿತರ ಮೇಲೆ ಹಲ್ಲೆ ನಡೆಯುತ್ತಿದೆ. ಚರ್ಮ ಸುಲಿಯುವುದೇ ದಲಿತರ ಕಸಬು. ಅವರ ಮೂಲ ಕಸಬಿಗೆ ತಡೆ ನೀಡಬಾರದು. ಇಂತಹ ವಿಷಯಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಘಟನೆಗಳು ಜರುಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ