Webdunia - Bharat's app for daily news and videos

Install App

ಮೀಸಲಾತಿ ವಿಚಾರದಲ್ಲಿ ಸರ್ಕಾರ ದಿಟ್ಟ ನಿರ್ಧಾರ : ಬೊಮ್ಮಾಯಿ

Webdunia
ಶುಕ್ರವಾರ, 14 ಅಕ್ಟೋಬರ್ 2022 (08:11 IST)
ಬೆಂಗಳೂರು : ಮೀಸಲಾತಿ ಸಂಬಂಧಿತ ಜನರ ಹಲವು ದಶಕಗಳ ಬೇಡಿಕೆಯನ್ನು ಬಿಜೆಪಿ ಸರ್ಕಾರ ಈಡೇರಿಸಿದೆ.

ಶಿಕ್ಷಣ ವಂಚಿತರು ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶದ ಅವಕಾಶ ನೀಡಿ ಸ್ವಾವಲಂಬನೆಯ-ಸ್ವಾಭಿಮಾನಿ ಬದುಕಿಗಾಗಿ ಈ ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಇಂದು ಜನಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಲವಾರು ದಶಕಗಳ ಕಾಲ ಅಧಿಕಾರದಲ್ಲಿತ್ತು. ಯಾಕೆ ಮೀಸಲಾತಿ ವಿಚಾರದಲ್ಲಿ ಇಂಥ ದಿಟ್ಟ ನಿರ್ಧಾರ ಮಾಡಿಲ್ಲ? ಕಾಂಗ್ರೆಸ್ ಪಕ್ಷದವರು ದೀನ ದಲಿತರು ಮತ್ತು ಎಸ್ಸಿ, ಎಸ್ಟಿ ಸಮುದಾಯದವರ ವಿರೋಧಿಗಳು ಎಂದು ಆಕ್ಷೇಪಿಸಿದ್ದಾರೆ. 

ರೈತರ ಮಕ್ಕಳಿಗೆ ವಿದ್ಯಾನಿಧಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. ರೈತ ಕೃಷಿ ಕೂಲಿಕಾರರು ಸೇರಿ ಅನೇಕ ಸಮುದಾಯಗಳಿಗೆ ಇದನ್ನು ವಿಸ್ತರಿಸಲಾಗಿದೆ. ಉದ್ಯೋಗ ಹೆಚ್ಚಳಕ್ಕೆ ನಾವು ಆದ್ಯತೆ ಕೊಡುತ್ತಿದ್ದೇವೆ. 5 ಲಕ್ಷ ಮಹಿಳೆಯರಿಗೆ, 5 ಲಕ್ಷ ಯುವಕರಿಗೆ ಕೆಲಸ ಸಿಗುವಂತೆ ಮಾಡುತ್ತಿದ್ದೇವೆ ಎಂದು ವಿವರಿಸಿದ ಅವರು, ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಾಮಾಜಿಕ ನ್ಯಾಯವು ಕೇವಲ ಭಾಷಣದ ಸರಕಾಗಿತ್ತು ಹಾಗೂ ಮತಬ್ಯಾಂಕ್ ಮಾಡಲು ಇದನ್ನು ಬಳಸಲಾಗುತ್ತಿತ್ತು ಎಂದು ಆಕ್ಷೇಪಿಸಿದರು. ಕನಕದಾಸರ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಅನುದಾನ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments