Publish Date: Sat, 25 Nov 2017 (18:52 IST)
Updated Date: Sat, 25 Nov 2017 (19:00 IST)
ರಾಜ್ಯದಲ್ಲಿ ಮದ್ಯ ನಿಷೇಧ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅಬಕಾರಿ ಸಚಿವ ಬಿ.ಆರ್.ತಿಮ್ಮಾಪುರ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಮದ್ಯ ನಿಷೇಧ ಮಾಡಲು ಆತುರವಾಗಿ ಕ್ರಮ ಜರುಗಿಸಲು ಸಾಧ್ಯವಿಲ್ಲ. ಜನರನ್ನು ಮಾನಸಿಕವಾಗಿ ಸಿದ್ಧಗೊಳಿಸಬೇಕಿದೆ. ಅದಕ್ಕಾಗಿ ಕರ್ನಾಟಕ ರಾಜ್ಯ ಮದ್ಯ ಸಂಯಮ ಮಂಡಳಿ ಹಾಗೂ ಸಂಘ ಸಂಸ್ಥೆಗಳಿಂದ ಜಾಗೃತಿ ಮೂಡಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಮದ್ಯ ನಿಷೇಧದಿಂದ ಎದುರಾಗುವ ದುಷ್ಪರಿಣಾಮಗಳ ಬಗ್ಗೆಯೂ ಮುನ್ನಚ್ಚರಿಕೆ ವಹಿಸಿ ಮದ್ಯ ನಿಷೇಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.