ಸರಕಾರಿ ಶಾಲೆಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡುವ ಯೋಜನೆಯನ್ನು ಪುನಃ ಆರಂಭಿಸಲು ಸರಕಾರ ಚಿಂತಿಸುತ್ತಿದ್ದು, ಮುಂದಿನ ತಿಂಗಳಿಂದ ಈ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 18 ರಂದು ರಾಯಚೂರಿನಲ್ಲಿ ಸಾಹಿತ್ಯ ಸಮೇಳನ ಏರ್ಪಡಿಸಲಾಗಿದ್ದು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿದ್ದೇವೆ ಎಂದು ತಿಳಿಸಿದರು.
ಸರಕಾರದಿಂದ ಸಾಹಿತ್ಯ ಸಮೇಳನಕ್ಕೆ ಕೇವಲ 2 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. ಇದನ್ನು 10 ಕೋಟಿ ರೂಪಾಯಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿಕೊಂಡಿದ್ದೇನೆ ಎಂದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಕಾವೇರಿ ವಿಚಾರದಲ್ಲಿ ರಾಜಕೀಯ ಹಾಗೂ ಧರಣಿ ಮಾಡುವುದು ಸರಿಯಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ