Publish Date: Sat, 04 Jan 2020 (06:50 IST)
Updated Date: Sat, 04 Jan 2020 (06:51 IST)
ರಾಮನಗರ : ರೇಷ್ಮೆನಗರಿ ರಾಮನಗರವನ್ನು ನವಬೆಂಗಳೂರು ಎಂದು ಮರುನಾಮಕರಣ ಮಾಡಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ತಿಳಿದುಬಂದಿದೆ.
ರಾಮನಗರವನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಐಟಿಬಿಟಿ ಹಾಗೂ ಹೂಡಿಕೆದಾರರನ್ನು ಜಿಲ್ಲೆಯತ್ತ ಸೆಳೆಯುವ ಮೂಲಕ ಬೆಂಗಳೂರಿನ ಮೇಲಿರುವ ಭಾರವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎನ್ನಲಾಗಿದೆ.
ಈ ಬಗ್ಗೆ ಬಿಜೆಪಿ ಮುಖಂಡರು ಸಿಎಂ ಯಡಿಯೂರಪ್ಪ ಅವರ ಬಳಿ ಪ್ರಸ್ತಾಪ ಮಾಡಿದ್ದು, ಸದ್ಯಕ್ಕೆ ಈ ಬಗ್ಗೆ ಪ್ರಾಥಮಿಕ ಹಂತದಲ್ಲಿ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.