Select Your Language

Notifications

webdunia
webdunia
webdunia
webdunia

ಮಾರಮ್ಮ ದೇವಿಯ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸುತ್ತೆ- ಸಚಿವ ಪುಟ್ಟರಂಗಶೆಟ್ಟಿ

ಮಾರಮ್ಮ ದೇವಿಯ ವಿಷ ಪ್ರಸಾದ ಸೇವಿಸಿ ಅಸ್ವಸ್ಥರಾದವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸುತ್ತೆ- ಸಚಿವ ಪುಟ್ಟರಂಗಶೆಟ್ಟಿ
ಚಾಮರಾಜನಗರ , ಶನಿವಾರ, 15 ಡಿಸೆಂಬರ್ 2018 (15:11 IST)
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಿ ದೇವಾಲಯದಲ್ಲಿ ಪ್ರಸಾದ ಸೇವಿಸಿ 11 ಮಂದಿ ಮೃತಪಟ್ಟಿದ್ದು 80 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಅಸ್ವಸ್ಥರಾದವರ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸುತ್ತೆ ಎಂದು ಹೇಳಿದ್ದಾರೆ.


ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಪ್ರಸಾದ ಸೇವಿಸಿ ಮೃತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೆಯೇ ಮೃತರ ಕುಟುಂಬದವರಿಗೆ ಸ್ಥಳದಲ್ಲೇ 25 ಸಾವಿರ ಹಣ ನೀಡಿದರು.


ನಂತರ ಮಾಧ್ಯಮದವರೊದಿಗೆ ಮಾತನಾಡಿದ ಅವರು,’ ಇದೂವರೆಗೆ 11 ಜನರು ಪ್ರಾಣ ಬಿಟ್ಟಿದ್ದಾರೆ. ಕೊಳ್ಳೇಗಾಲ ಹಾಗೂ ಮೈಸೂರು ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆದಿದೆ. ಮಾರಮ್ಮನ ಪ್ರಸಾದ ಸೇವಿಸಿ ಭಕ್ತಾದಿಗಳು ಸಾವನ್ನಪ್ಪಿರುವುದು ವಿಪರ್ಯಾಸ. ಪ್ರಸಾದದಲ್ಲಿ ವಿಷ ಸೇರಿಸಿ ಹೀಗೆ ಅಮಾಯಕರ ಬಲಿ ಪಡೆದಿರೋ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣ ; ಅಸ್ವಸ್ಥ ಮಹಿಳೆಗೆ ಚಿಕಿತ್ಸೆ ನೀಡಲು ತಡಮಾಡಿದ್ದಕ್ಕೆ ವೈದ್ಯರ ಮೇಲೆ ಶಾಸಕ ಗರಂ