Webdunia - Bharat's app for daily news and videos

Install App

‘CJI ತೀರ್ಪಿಗೆ ಸರ್ಕಾರ ಬದ್ಧವಾಗಿರುತ್ತೆ’

Webdunia
ಗುರುವಾರ, 13 ಅಕ್ಟೋಬರ್ 2022 (15:51 IST)
ಗೃಹ ಸಚಿವ ಆರಗ ಜ್ಞಾನೇಂದ್ರ ಹಿಜಾಬ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಿಜಾಬ್ ಸಂಬಂಧ ಸುಪ್ರೀಂ ಕೋರ್ಟ್​ನ ಇಬ್ಬರು ಜಡ್ಜ್​​​​ಗಳು ವಿಭಿನ್ನ ತೀರ್ಪು ನೀಡಿದ್ದಾರೆ. CJI ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ ಆಗಿದೆ ಹಾಗೂ CJI ಪೀಠ ನೀಡುವ ತೀರ್ಪಿಗೆ ಸರ್ಕಾರ ಬದ್ಧವಾಗಿರುತ್ತೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಹಿಜಾಬ್ ಬಗ್ಗೆ ಭಿನ್ನಾಭಿಪ್ರಾಯ ಇರುವ ಆದೇಶಗಳು ಹೊರ ಬಂದಿವೆ. ಮುಂದೆ ಮುಖ್ಯ ನ್ಯಾಯಮೂರ್ತಿಗಳ ನಿರ್ಧಾರ ಮಹತ್ವದ್ದಾಗಿದೆ. ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಹಿಜಾಬ್ ಮನವಿಯನ್ನು ವಜಾಗೊಳಿಸಿದ್ದಾರೆ. ಆದರೆ ನ್ಯಾಯಮೂರ್ತಿ ಧುಲಿಯಾ ಅವರು ನಾನು ಕರ್ನಾಟಕ ಹೈಕೋರ್ಟ್ ಆದೇಶವನ್ನು ಬದಿಗಿರಿಸಿದ್ದೇನೆ ಮತ್ತು ಸರ್ಕಾರಿ ಆದೇಶವನ್ನು ರದ್ದುಗೊಳಿಸಿದ್ದೇನೆ ಎಂಬ ತೀರ್ಪನ್ನು ನೀಡಿದ್ದಾರೆ. ಕರ್ನಾಟಕ ಸರ್ಕಾರ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯ ಹಿತ ದೃಷ್ಟಿಯಿಂದ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಇದರ ಬಗ್ಗೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ತೀರ್ಪಿನ ಕುರಿತು ಕಾನೂನು ತಜ್ಞರ ಸಲಹೆ ಪಡೆದು ಕೊಳ್ಳಲಾಗುವುದು ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಡಾ ಕೇಸ್ ನಲ್ಲಿ ಸುಪ್ರೀಂಕೋರ್ಟ್ ರಿಲೀಫ್ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಫುಲ್ ಖುಷ್

ಹೈದರಾಬಾದ್‌ನ ವಿಮಾನ ದುರಂತದಂತೆ ಬಾಂಗ್ಲಾದೇಶದಲ್ಲೂ ಕಾಲೇಜಿಗೆ ಅಪ್ಪಳಿಸಿದ ಎಫ್ 7 ಯುದ್ಧ ವಿಮಾನ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments