Select Your Language

Notifications

webdunia
webdunia
webdunia
webdunia

ತೆರವು ಕಾರ್ಯಾಚರಣೆಯಲ್ಲಿ ನಿವೇಶನ ಕಳೆದುಕೊಂಡವರಿಗೆ ಪುನರ್ವಸತಿ: ರಾಮಲಿಂಗಾರೆಡ್ಡಿ

ತೆರವು ಕಾರ್ಯಾಚರಣೆಯಲ್ಲಿ ನಿವೇಶನ ಕಳೆದುಕೊಂಡವರಿಗೆ ಪುನರ್ವಸತಿ: ರಾಮಲಿಂಗಾರೆಡ್ಡಿ
ಬೆಂಗಳೂರು , ಗುರುವಾರ, 21 ಮೇ 2015 (13:56 IST)
ನಗರದ ಕೆರೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಉಸ್ತುವಾರಿ ಸಚಿವ ಆರ್.ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯಿಸಿದ್ದು, ತೆರವು ಕಾರ್ಯದಲ್ಲಿ ಮನೆ ಕಳೆದುಕೊಂಡ ನಿವಾಸಿಗಳಿಗೆ ಮನೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ. 
 
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆರವು ಕಾರ್ಯಾಚರಣೆಯಲ್ಲಿ ಮನೆ ಕಲೆದು ಕೊಂಡ ನಿವಾಸಿಗಳನ್ನು ಪಟ್ಟಿ ಮಾಡಿ ಅವರಿಗೆ ಪುನರ್ವಸತಿ ಮಾಡಿಕೊಡಲಾಗುವುದು ಎಂದ ಅವರು, ಈ ಸಂಬಂಧ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ. ಅಲ್ಲದೆ ಜಿಲ್ಲಾಧಿಕಾರಿಗಳಿಂದ ಇನ್ನೂ ವರದಿ ಬಂದಿಲ್ಲ. ವರದಿ ಬಂದ ಬಳಿಕ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದರು. 
 
ಪ್ರಕರಣದ ಹಿನ್ನೆಲೆ: ಸರ್ಕಾರದ ನೀತಿ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಆಸ್ತಿಯಾಗಿರುವ ಕೆರೆಯನ್ನು ಒತ್ತುವರಿಮಾಡಿಕೊಂಡು ನಿವೇಶನಗಳನ್ನು ಕಟ್ಟಿಕೊಳ್ಳಲಾಗಿದೆ ಎಂಬ ಕಾರಣದಿಂದ ಕಾರ್ಯಾಚಱಣೆಗೆ ಮುದಾಗಿದ್ದ ಸರ್ಕಾರದ ಕಂದಾಯ ಇಲಾಖಾಧಿಕಾರಿಗಳು, ನಗರದ ಬಾಣಸವಾಡಿ ಕೆರೆಯನ್ನು ಒತ್ತುವರಿ ಮಾಡಿಕೊಂಡು ಹೆಚ್ಆರ್‌ಬಿಆರ್ ಲೇಔಟ್‌ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ ಲೇಔಟ್ ನಲ್ಲಿ ಕಟ್ಟಡಗಳ ತೆರವು ಕಾರ್ಯ ಕೈಗೊಂಡು 60ಕ್ಕೂ ಅಧಿಕ ವಾಣಿಜ್ಯಿಕ ಕಟ್ಟಡಗಳು ಹಾಗೂ ಸಾರ್ವಜನಿಕರ ನಿವಾಸಗಳನ್ನು ಕೆಡವಿದ್ದರು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ಪಕ್ಷಗಳ ನಾಯಕರೂ ಸೇರಿದಂತೆ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾರ್ಯಚರಣೆಯನ್ನು ಕೈ ಬಿಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ನಿವಾಸಿಗಳಿಗೆ ಮರು ಪುನರ್ವಸತಿ ವ್ಯವಸ್ಥೆ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. 

Share this Story:

Follow Webdunia kannada