Select Your Language

Notifications

webdunia
webdunia
webdunia
webdunia

ಅಂಬೇಡ್ಕರ್ ಜಯಂತಿ ಅಂಗವಾಗಿ 13 ರಿಂದ 20ರವರೆಗೆ ರಾಜ್ಯದಾದ್ಯಂತ ಕಾರ್ಯಕ್ರಮ: ಕಾರಜೋಳ

Govinda Karajola
ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ರಾಜ್ಯದಾದ್ಯಂತ  ನಾಳೆಯಿಂದ (ಏ.13) ರಿಂದ 20 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಅವರು ಹೇಳಿದರು. 
 
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಾಬಾ ಸಾಹೇಬ್ ಅವರ ಜಯಂತಿ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಇಡೀ ರಾಜ್ಯಕ್ಕೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಿಗೇ ಭಾರತೀಯ ಜನತಾ ಪಕ್ಷ ವತಿಯಿಂದ ಸೂಚನೆ ನೀಡಲಾಗಿದೆ ಎಂದರು.
 
ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿ ಮಾತ್ರ ಅಲ್ಲ. ಅವರು ಸಾಮಾಜಿಕ ನ್ಯಾಯದ ಹರಿಕಾರರೂ ಆಗಿದ್ದರು. ಸಮಾನತೆಯ ಸಂಕೇತದಂತಿದ್ದರು. ಹಲವು ವರ್ಷಗಳ ಹಿಂದೆಯೇ ಅಭಿವೃದ್ಧಿಶೀಲ ರಾಷ್ಟ್ರಕ್ಕೆ ಅಡಿಪಾಯ ಹಾಕಿದವರು. ಇದೇ ರೀತಿ ಪ್ರಧಾನಿ ನರೇಂದ್ರ ಮೋದಿ ಅವರು ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಐದು ಪ್ರಮುಖ ಸ್ಥಳಗಳನ್ನು 'ಪಂಚತೀರ್ಥʼ ಗಳಾಗಿ ಅಭಿವೃದ್ಧಿ ಪಡಿಸಿದ್ದಾರೆ. ಸಂವಿಧಾನ ದಿನ ಆಚರಿಸಿದ್ದು ಮೋದಿ ಅವರು ಅಂಬೇಡ್ಕರ್ ಅವರಿಗೆ ಕೊಟ್ಟ ಗೌರವ ಎಂದು ವಿವರಿಸಿದರು. 
 
ಅಂಬೇಡ್ಕರ್ ಅವರು ಸಂವಿಧಾನ ಶಿಲ್ಪಿ ಆಗಿದ್ದ ಜೊತೆಯಲ್ಲೇ ಸಾಮಾಜಿಕ ಸಾಮರಸ್ಯದ ಪ್ರವರ್ತಕರಾಗಿದ್ದರು ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ಸೌಲಭ್ಯ ವಂಚಿತ ಜನರ ಕಲ್ಯಾಣಕ್ಕಾಗಿ ಇಡೀ ಜೀವನವನ್ನು ಅಂಬೇಡ್ಕರ್ ಅವರು ಸಮರ್ಥಿಸಿಕೊಂಡಿದ್ದರು. ಅವರಿಗೆ ಗೌರವ ಸಲ್ಲಿಸಲು ಇಡೀ ರಾಷ್ಟ್ರ ಋಣಿಯಾಗಿದೆ ಎಂದು ನುಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಹೈಡ್ರಾಮಾ ಬೆನ್ನಲ್ಲೇ ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿಗೆ ಗೇಟ್‌ಪಾಸ್‌