Publish Date: Thu, 19 Feb 2026 (18:07 IST)
Updated Date: Thu, 19 Feb 2026 (18:09 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು.
ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಂಗೀಕರಿಸಿದ ಖಂಡನಾ ನಿರ್ಣಯ ಕುರಿತು ಅವರು ಮಾಹಿತಿ ನೀಡಿದರು. ಬಹಳ ಪ್ರಮುಖವಾಗಿ ಅವರು ದಲಿತರಿಗೆ ಮೀಸಲಿಟ್ಟ 39,500 ಕೋಟಿ ರೂಪಾಯಿಯನ್ನು ಗ್ಯಾರಂಟಿ ಮತ್ತು ಅನ್ಯ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ ಎಂದು ಟೀಕಿಸಿದರು. ಇದನ್ನು ಕೂಡಲೇ ಎಸ್‍ಸಿ, ಎಸ್‍ಟಿ ಸಮುದಾಯದ ಕಲ್ಯಾಣಕ್ಕೆ ಬಳಸಬೇಕು ಎಂದು ಆಗ್ರಹಿಸಿದರು.
ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಅನುದಾನ ಕೊಟ್ಟಿಲ್ಲ. ಸಿದ್ದರಾಮಯ್ಯನವರ ಸರಕಾರದ ವಿರುದ್ಧ ಅವರ ಶಾಸಕರೇ ಬಂಡೇಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.
ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಖಂಡನಾ ನಿರ್ಣಯ: ಬಿ.ಶ್ರೀರಾಮುಲು
ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಖಂಡನಾ ನಿರ್ಣಯವನ್ನು ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಂಗೀಕರಿಸಲಾಗಿದೆ.