Daily Horoscope

Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜನರು ಕ್ಷಮಿಸುವುದಿಲ್ಲ: ಗೋವಿಂದ ಕಾರಜೋಳ

Govinda Karajola
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದಲಿತರಿಗೆ ಒಳಮೀಸಲಾತಿ ನೀಡುವ ಬದಲು ಗೊಂದಲ ಸೃಷ್ಟಿಸಿ ವಿಷಬೀಜ ಬಿತ್ತಿ ಬೀದಿಯಲ್ಲಿ ನಿಂತು ಬಡಿದಾಡುವಂತೆ ಮಾಡಿದೆ. ನಾಡಿನ ಜನ ಇವರನ್ನು ಕ್ಷಮಿಸುವುದಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ಆರೋಪಿಸಿದ್ದಾರೆ.
 
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅಹಿಂದ ನಾಯಕ ಎನಿಸಿಕೊಳ್ಳಲು ಯೋಗ್ಯತೆ ಇಲ್ಲ. ದಲಿತ ಸಮುದಾಯಗಳಿಗೆ ಅವರು ದೊಡ್ಡ ಮೋಸ ಮಾಡಿದ್ದಾರೆ. 30 ವರ್ಷಗಳಿಂದ ರಾಜ್ಯದಲ್ಲಿ ಒಳಮೀಸಲಾತಿಗೆ ಹೋರಾಟ ನಡೆಯುತ್ತಿದೆ. ಜನಸಂಖ್ಯೆಗೆ ಅನುಗುಣವಾಗಿ ಎಸ್‍ಸಿ ಮತ್ತು ಎಸ್‍ಟಿ ಮೀಸಲಾತಿ ಹೆಚ್ಚಳ ಆಗಬೇಕು ಎಂಬ ಬೇಡಿಕೆ ಇದೆ. ಆದರೆ ಇದನ್ನು ಲೆಕ್ಕಿಸದೆ ಕಾಂಗ್ರೆಸ್ ಸರ್ಕಾರ ಕೋರ್ಟ್ ಆದೇಶವನ್ನೇ ಬದಲಿಸಿ ಸರಿಯಾಗಿ ಮೀಸಲಾತಿ ಅನುಷ್ಠಾನ ಮಾಡಲಿಲ್ಲ ಎಂದು ಹೇಳಿದರು.  
 
ಮೀಸಲಾತಿ ವಿಷಯದಲ್ಲಿ ಜಾತಿಗಳ ಮಧ್ಯೆ ಜಗಳ ಹಚ್ಚಬೇಡಿ. ಕೋರ್ಟ್ ಆದೇಶ ಮಾರ್ಪಾಡು ಮಾಡಿ ಕಡಿಮೆ ಮೀಸಲಾತಿ ನೀಡುವ ನಿಮ್ಮನ್ನು ಅಹಿಂದ ನಾಯಕ ಎಂದು ಒಪ್ಪಿಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದರು. ಒಳಮೀಸಲಾತಿಗೆ ರಾಜ್ಯದಲ್ಲಿ ಹೋರಾಟ ತೀವ್ರಗೊಂಡಾಗ ನ್ಯಾ. ಸದಾಶಿವ ಆಯೋಗವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿತ್ತು. ನ್ಯಾ. ನಾಗಮೋಹನ್ ದಾಸ್ ಅವರ ವರದಿಯನ್ನು ತರಿಸಿಕೊಂಡಿತ್ತು. ಬಿಜೆಪಿ ಸರ್ಕಾರ ಇದ್ದಾಗ ದಲಿತರ ಹೋರಾಟಕ್ಕೆ ಮಾನ್ಯತೆ ನೀಡಿ ಬಸವರಾಜ ಬೊಮ್ಮಾಯಿ ಅವರು ಜನಸಂಖ್ಯೆಗೆ ಅನುಗುಣಾಗಿ ಎಸ್‍ಸಿಗೆ ಶೇ15 ರಿಂದ ಶೇ17, ಎಸ್‍ಟಿಗೆ ಶೇ 3 ದಿಂದ ಶೇ 7 ಮಾಡಿದರು. ಸಾಮಾಜಿಕ ನ್ಯಾಯದ ಅಡಿಯಲ್ಲಿ ನಾಲ್ಕು ವರ್ಗೀಕರಣ ಮಾಡಿದರು ಎಂದು ವಿವರಿಸಿದರು.  
 
ಕಾನೂನು ಸಚಿವರಾದ ಮಾಧುಸ್ವಾಮಿ ಅವರ ನೇತೃತ್ವದಲ್ಲಿ ಸಂಪುಟದ ಉಪ ಸಮಿತಿ ವರದಿ ಪಡೆದು ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಎಸ್‍ಸಿಯಲ್ಲಿ ಮಾದಿಗರು ಮತ್ತು ಸಂಬಂಧಿತ ಜಾತಿಗಳಿಗೆ ಶೇ 6 ಮತ್ತು ಛಲವಾದಿ ಮತ್ತು ಉಪ ಜಾತಿಗಳಿಗೆ 5.5 ಪಸೆರ್ಂಟ್, ಲಂಬಾಣಿ, ಬೋವಿ, ಕೊರಮ ಕೊರಚಕ್ಕೆ 4.5 ಪರ್ಸೆಂಟ್, ಅಲೆಮಾರಿಗೆ ಶೇ 1 ನೀಡಲು 2022 ರಲ್ಲಿ ಎರಡೂ ಸದನದಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅನುಮೋದನೆ ಪಡೆದು ಕಾನೂನು ಮಾಡಲಾಗಿತ್ತು. 4 ವರ್ಷಗಳ ಕಾಲ 17 ಮತ್ತು 7 ಪರ್ಸೆಂಟ್ ಎಸ್‍ಟಿ/ ಎಸ್ಸಿಗೆ ಮೀಸಲಾತಿ ಸೌಲಭ್ಯ ಸಿಕ್ಕಿತ್ತು ಎಂದರು. 
 
ಸಿದ್ದರಾಮಯ್ಯ ಸರ್ಕಾರ ಕೋರ್ಟ್‍ಗೆ ಸರಿಯಾಗಿ ಮನವರಿಕೆ ಮಾಡಿಕೊಡದೆ, ಸಾಮಾಜಕ ನ್ಯಾಯದ ಅಡಿ ಸಂವಿಧಾನದ ಆಶಯಗಳಿಗೆ ಅನುಗುಣ ಜಾರಿ ಮಾಡದೆ ಭಾಗಶಃ ತಡೆ ನೀಡಿದ ನಂತರ ಮೆಮೊ ಹಾಕಿದರು. ನಾವು ಹದಿನೇಳು ಮತ್ತು ಏಳು ಪರ್ಸೆಂಟ್ ಕೊಡಲ್ಲ. 1995 ರ ಆದೇಶದ ಅನ್ವಯ 15 ಶೇ ಎಸ್‍ಸಿಗೆ, 3 ಶೇ ಎಸ್‍ಟಿಗೆ ಕೊಡುತ್ತೇವೆ ಎಂದರು; ಅನುಮತಿ ಕೇಳಿದರು. ವಿಧಿ ಇಲ್ಲದೆ ಒಪ್ಪಿತು. ಯಾವುದೇ ಕೋರ್ಟ್ 17 ಮತ್ತು 7 ಶೇಕಡಾಕ್ಕೆ ತಡೆ ನೀಡಿಲ್ಲ. ವಿರೋಧ ಸಹ ಮಾಡಿಲ್ಲ. ಇವರೇ ಬರೆದುಕೊಟ್ಟು ಕಡಿಮೆ ಮಾಡಿ ದಲಿತರಿಗೆ ಸಿದ್ದರಾಮಯ್ಯ ಸರ್ಕಾರ ಅನ್ಯಾಯ ಮಾಡಿದೆ. ಇವರು ಅಹಿಂದ ನಾಯಕ ಎಂಬ ಗೌರವವನ್ನು ಕಳೆದಕೊಂಡರು. ಆದೇಶ ಮಾರ್ಪಾಡು ಮಾಡಿ ಕಡಿಮೆ ಮಾಡುತ್ತಾರೋ ಅವರು ಅಹಿಂದ ನಾಯಕ ಅಲ್ಲ ಎಂದರು.
 
ಈ ಹಿಂದೆ ಮಾಡಿದ್ದನ್ನು ಬಿಟ್ಟು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ಮಾಡಿ ವರದಿ ಪಡೆದು ವಿಶೇಷ ಸಂಪುಟ ಸಭೆ ಮಾಡಲು ಈ ಸರ್ಕಾರಕ್ಕೆ ಯಾವ ನೈತಿಕತೆ ಇಲ್ಲ. ವರದಿ ನೀಡಿದ ನ್ಯಾಯಮೂರ್ತಿಗಳಿಗೆ ಏನು ಹೇಳಲು ಬಯಸುತ್ತೀರಿ. ಅವರಿಗೆ ಅವಮಾನ ಮಾಡಿದ್ದಂತೆ ಅಲ್ಲವೇ. ಒಪ್ಪಬೇಕು ಇಲ್ಲ ತಿರಸ್ಕರಿಸಬೇಕು ಇನ್ನೊಂದು ಸಮಿತಿ ಮಾಡಿ ಅವಮಾನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. 
 
ತಮಗೆ ಮೀಸಲಾತಿ ಬೇಕು ಎಂದು ಮೂವತ್ತು ವರ್ಷಗಳಿಂದ ಹೋರಾಡಿದ್ದರೂ ಅವರಿಗೆ ನ್ಯಾಯ ಕೊಡಿ ಇಲ್ಲದೇ ಇದ್ದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ನ್ಯಾ. ಸದಾಶಿವ ಆಯೋಗದ ವರದಿ ಪ್ರಕಾರವಾದರೂ ಕೊಡಿ. ಇಲ್ಲಾದರೂ ಸಾಮಾಜಿಕ ನ್ಯಾಯದ ಪಾಲನೆ ಮಾಡಿ. ಯಾರಿಗೂ ಅನ್ಯಾಯ ಮಾಡಬೇಡಿ. 2023 ರಲ್ಲಿ ಲಂಬಾಣಿ ಮತ್ತು ಬೋವಿ ಜನಾಂಗವನ್ನು ಎಸ್‍ಸಿ ಪಟ್ಟಿಯಿಂದ ತೆಗೆಯಲು ಬೊಮ್ಮಾಯಿ ಸರ್ಕಾರ ಶಿಫಾರಸು ಮಾಡಿದೆ ಎಂದು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರು, ತಪ್ಪು ತಿಳಿವಳಿಕೆ ನೀಡಿ ಯಡಿಯೂರಪ್ಪ ಅವರ ಮನೆಗೆ ಕಲ್ಲು ಹೊಡೆಸಿದರು ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
 
ಇಪ್ಪತ್ತು ವರ್ಷಗಳಿಂದ ಸುಪ್ರೀಕೋರ್ಟ್ ನಲ್ಲಿ ಬಾಕಿ ಉಳಿದಿತ್ತು. ಯಾವ ಉದ್ದೇಶಕ್ಕೆ ಮೀಸಲಾತಿ ಬಂದಿದೆ ಅದು ಈಡೇರಬೇಕು, ಸೌಲಭ್ಯ ಸಿಗಬೇಕು ಎಂದು ಪ್ರಧಾನಿಗಳಿಗೆ ಮನವರಿಕೆ ಮಾಡಿದೆವು. ಆಗ ಅವರು ಸಭೆ ಮಾಡಿ ಸುಪ್ರೀಂಕೋರ್ಟ್‍ಗೆ ಅಫಿಡವಿಟ್ ಹಾಕಿಸಿದರು. ನಂತರ ಆದೇಶ ಮಾಡಿ ಇಷ್ಟು ವರ್ಷವಾದರೂ ಜಾರಿ ಮಾಡಲಿಲ್ಲ. ಒಂದೊಂದು ಜಾತಿಗಳಿಗೆ ತಪ್ಪು ತಿಳಿವಳಿಕೆ ಮಾಡುವಂತೆ ಮಾಡಿ ರಸ್ತೆಯಲ್ಲಿ ಬಡಿದಾಡುವಂತೆ ಕಾಂಗ್ರೆಸ್ ಸರ್ಕಾರ ಮಾಡುತ್ತಾ ಬಂದಿದೆ ಎಂದರು. 
ಸುಪ್ರೀಂ ಕೋರ್ಟ್ ಆದೇಶದಂತೆ, ಸಂವಿಧಾನದ ಮೌಲ್ಯಗಳಿಗೆ ಅನುಗುಣವಾಗಲಿ ನೂರ ಒಂದು ಜಾತಿಗಳಿಗೆ ಮೀಸಲಾತಿ ಸೌಲಭ್ಯ ನೀಡಬೇಕು ಎಂಬುದೇ ಬಿಜೆಪಿ ಒತ್ತಾಯ ಎಂದರು. ಮೊದಲು ಒಳಮೀಸಲಾತಿ ಜಾರಿ ಮಾಡಿ. ತಪ್ಪುಗಳಾದಾಗ ಸರಿಪಡಿಸಿ. ಅದಕ್ಕೆ ಅವಕಾಶ ಇದೆ ಎಂದು ಹೇಳಿದರು.
 
 

Share this Story:

Follow Webdunia kannada

ಮುಂದಿನ ಸುದ್ದಿ

ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಬುರಗಿ ಲಾಸ್ಟ್ ಬರೋದು ಯಾಕೆ