Publish Date: Thu, 04 Jun 2026 (19:13 IST)
Updated Date: Thu, 04 Jun 2026 (19:15 IST)
ಬೆಂಗಳೂರು: ಜಿಲ್ಲೆಯ ಭೀಮಾತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ 6 ಜನರ ಬರ್ಬರ ಹತ್ಯೆ ಪ್ರಕರಣ ಸಂಬಂಧ ಮತ್ತೇ 6 ಆರೋಪಿಗಳನ್ನು ಬಂಧಿಸಲಾಗಿದೆ.
ಇಲ್ಲಿನ ಅಪ್ಪುಗೌಡ ಲಗಮನಗೌಡ ಉರ್ಫ್ ಲಕ್ಕನಗೌಡ ಪಾಟೀಲ (49), ಶಂಕ್ರೆಪ್ಪ ಮಾದೇವ ಅರಕೇರಿ (33), ಅಪ್ಪಾಸಾಬ ಉರ್ಫ್ ಕಿಶನ್ ಶಂಕರ ಭೋವಿ (56), ಸತ್ಯೆಪ್ಪ ಜಕ್ಕಪ್ಪ ಬಿರಾದಾರ (46), ಸುಲ್ತಾನ ಮಾದೇವ ಬಿರಾದಾರ (24), ಮಹೇಶ ಬೆಳ್ಳೆಣ್ಣಿ ಬಿರಾದಾರ (25) ಬಂಧಿತ ಆರೋಪಿಗಳು.
ಈಗಾಗಲೇ ಕಳೆದ ಜೂ.1, 2026 ರಂದು 12 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೀಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಒಟ್ಟು 18 ಜನ ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ