Publish Date: Mon, 02 Aug 2021 (09:44 IST)
Updated Date: Mon, 02 Aug 2021 (09:48 IST)
ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿದ್ದ ಡಾ.ಎಸ್.ಸೆಲ್ವಕುಮಾರ್ ಅವರಿಂದ ತೆರವಾದ ಮುಖ್ಯಮಂತ್ರಿಗಳ ಕಾರ್ಯದರ್ಶಿ ಹುದ್ದೆಗೆ ಪೊನ್ನುರಾಜ್ ಅವರನ್ನು ವರ್ಗಾಯಿಸಲಾಗಿದೆ.
ಕೆಪಿಸಿಎಲ್ ವ್ಯವಸ್ಥಾಪಕ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ಮುಂದುವರೆಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಸೆಲ್ವಕುಮಾರ್ ಅವರನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿ.ಪೊನ್ನುರಾಜ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿದ್ದ ಡಾ.ಎಸ್.ಸೆಲ್ವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.