Select Your Language

Notifications

webdunia
webdunia
webdunia
webdunia

ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

Chief Minister Siddaramaiah, Karnataka Scheduled castes and Scheduled tribes, Karnataka Congress Government,

Sampriya

ಬೆಂಗಳೂರು , ಮಂಗಳವಾರ, 18 ಫೆಬ್ರವರಿ 2025 (18:58 IST)
ಬೆಂಗಳೂರು:  ಶೋಷಿತರ, ದಲಿತ ಸಮಯದಾಯಗಳ ಬೇಡಿಕೆಗಳನ್ನು ನಾನು ಮುಖ್ಯಮಂತ್ರಿ ಆದ ಬಳಿಕ ನಿರಂತರವಾಗಿ ಈಡೇರಿಸುತ್ತಲೇ ಇದ್ದೇನೆ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌‌ನ  ಅಭಿವೃದ್ಧಿ ಹಣದಲ್ಲಿ ಶೇ24 ರಷ್ಟು ಹಣ ಮೀಸಲಾಗಿಡುವ ಕಾಯ್ದೆ ಜಾರಿ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ದಲಿತ ಮುಖಂಡರುಗಳೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಅವರು ಮಾತನಾಡಿದರು.

ಈ ಕಾಯ್ದೆಯನ್ನು ಕೇಂದ್ರದ ಬಿಜೆಪಿ ಸರ್ಕಾರವಾಗಲಿ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ದಲಿತ ಸಮುದಾಯದ ಗುತ್ತಿಗೆದಾರರಿಗೆ ಒಂದು ಕೋಟಿ ರೂಪಾಯಿ ವರೆಗಿನ ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಾವು ಮಾತ್ರ. ಇದನ್ನು 2 ಕೋಟಿಗೆ ವಿಸ್ತರಿಸಬೇಕು ಎನ್ನುವ ಬೇಡಿಕೆ ಬಗ್ಗೆಯೂ ಪರಿಶೀಲಿಸುತ್ತೇನೆ ಎಂದರು.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು , ಪಿಟಿಸಿಎಲ್ ಕಾಯ್ದೆ ಮಾಡಿದ್ದು ನಾವು, ಹೊಸದಾಗಿ ಕೈಗಾರಿಕೆ ಆರಂಭಿಸುವವರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಿದ್ದೇವೆ. ಈ ಮೂಲಕ ಇಡೀ ದೇಶಕ್ಕೆ ಮಾದರಿಯಾದ ಕಾಯ್ದೆ, ಕಾನೂನು, ನಿಯಮಗಳನ್ನು ಮಾಡಿರುವ ದಾಖಲೆ ನಮ್ಮ ಸರ್ಕಾರದ್ದಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕುಂಭಮೇಳದ ನೀರನ್ನೂ ಯಾರೂ ಕುಡಿಯಬೇಡಿ: ಮಲ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದ ವೈದ್ಯರು