Select Your Language

Notifications

webdunia
webdunia
webdunia
webdunia

ಶ್ರೀಗಳ ಕಾರ್ಯದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಖಾಕಿ ಪಡೆಗೆ ಸರ್ಕಾರದಿಂದ ಭರ್ಜರಿ ಉಡುಗೊರೆ

ಶ್ರೀಗಳ ಕಾರ್ಯದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಖಾಕಿ ಪಡೆಗೆ ಸರ್ಕಾರದಿಂದ ಭರ್ಜರಿ ಉಡುಗೊರೆ
ತುಮಕೂರು , ಬುಧವಾರ, 23 ಜನವರಿ 2019 (11:21 IST)
ತುಮಕೂರು : ಸಿದ್ದಗಂಗಾ ಶ್ರೀಗಳ ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಕ್ಕೆ ಮುಂದಿನ ಬಜೆಟ್ ನಲ್ಲಿ ಪೊಲೀಸರ ವೇತನವನ್ನು ಹೆಚ್ಚಿಸುವುದಾಗಿ ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.


ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಕೊನೆಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಲಕ್ಷಾಂತರ ಜನ ಸೇರಿದರೂ ಕಿಂಚಿತ್ತೂ ಮಠದ ಆವರಣದಲ್ಲಿ ಶಿಸ್ತಿಗೆ ಲೋಪ ಬಾರದಂತೆ, ಕಾನೂನಿಗೆ ಧಕ್ಕೆ ಬಾರದಂತೆ ನಡೆದಾಡುವ ದೇವರನ್ನು ಶ್ರದ್ಧೆ ಭಕ್ತಿ ಪ್ರೀತಿಯಿಂದ ಅಂತಿಮ ವಿಧಿವಿಧಾನ ನಡೆಸಲಾಯಿತು.


ತುಮಕೂರು ಪೊಲೀಸರ ಜೊತೆ ಚಿಕ್ಕಬಳ್ಳಾಪುರ ಹಾಗೂ ಸುತ್ತಮುತ್ತ ಜಿಲ್ಲೆಯ ಸುಮಾರು ಮೂವತ್ತು ಸಾವಿರದಷ್ಟು ಪೊಲೀಸರ ದಂಡು ಸ್ಥಳದಲ್ಲಿ ನಿಯೋಜನೆಗೊಂಡಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಂ ಹೂಡಿ ಪ್ರತಿ ಕ್ಷಣವೂ ಮಾರ್ಗದರ್ಶನ ಕೊಡುತ್ತಿದ್ದರು. ಪೇದೆಗಳು ಒಂದು ಕ್ಷಣವೂ ವಿರಮಿಸದೇ ಪಾಳಿಗಳನ್ನು ಲೆಕ್ಕಿಸದೇ ಕೆಲಸ ಮಾಡಿದ್ದಾರೆ. ಈ ರೀತಿ ಗುರು ಸೇವೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಕ್ಕೆ ಮುಂದಿನ ಬಜೆಟ್ ನಲ್ಲಿ ಔರದ್ಕರ್ ವರದಿ ಜಾರಿ ಮಾಡಿ ಪೊಲೀಸರ ಬದುಕು ಹಸನು ಮಾಡುವ ಯೋಜನೆ ರೂಪಿಸುವುದಾಗಿ ಗೃಹ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.


ಹಾಗೇ ಪೊಲೀಸರ ಕಾರ್ಯಕ್ಕೆ ಸಿಎಂ ಕುಮಾರಸ್ವಾಮಿ ಸಹ ಮೆಚ್ಚುಗೆ ಸೂಚಿಸಿದ್ದಾರೆ. ಶ್ರೀಗಳ ಅಂತಿಮ ದರ್ಶನದ ವೇಳೆ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದ ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿ ಔರಾದ್ಕಾರ್ ವರದಿ ಜಾರಿ ಮಾಡುವುದಕ್ಕೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಉಮೇಶ ಜಾಧವ್ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ; ಮಾಜಿ ಸಚಿವರಿಂದ ಮಾಹಿತಿ ಬಹಿರಂಗ