Publish Date: Tue, 07 Nov 2023 (17:00 IST)
Updated Date: Tue, 07 Nov 2023 (14:12 IST)
ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಅವಧಿ ಮುಂದೂಡಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು,ಸರ್ಕಾರಿ ನೌಕರರಿಗೆ ನ್ಯಾಯಯುತವಾಗಿ ವೇತನ ಪರಿಷ್ಕರಣೆ ಮಾಡಲು ವೇತನ ಆಯೋಗ ರಚಿಸಿ ಮಧ್ಯಂತರ ಪರಿಹಾರ ನೀಡಲಾಗ್ತಿದೆ.ಆದ್ರೆ ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ.
ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ.ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ.ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ.ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು.ಈಗ ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ.
ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ.ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್ ನವ್ರು ಕಾಲಹರಣ ಮಾಡ್ತಿದ್ದಾರೆ.ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ.ನಮ್ಮೆಲ್ಲ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸ್ತಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.