Select Your Language

Notifications

webdunia
webdunia
webdunia
webdunia

ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಕಟ್: ಅಶೋಕ್ ಗೆಹ್ಲೋಟ್

ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಕಟ್: ಅಶೋಕ್ ಗೆಹ್ಲೋಟ್
ಜೈಪುರ , ಶುಕ್ರವಾರ, 11 ಆಗಸ್ಟ್ 2023 (13:57 IST)
ಜೈಪುರ : ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ ಪ್ರಕರಣಗಳಿಂದ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದ್ದ ರಾಜಸ್ಥಾನ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ರಾಜ್ಯದಲ್ಲಿ ಅತ್ಯಾಚಾರ ಆರೋಪಿಗಳು ಹಾಗೂ ಅಪರಾಧ ಕೃತ್ಯ ಹಿನ್ನೆಲೆ ಉಳ್ಳವರಿಗೆ ಸರ್ಕಾರಿ ಉದ್ಯೋಗ ನೀಡುವುದಿಲ್ಲ ಎಂದು ಘೋಷಣೆ ಮಾಡಿದೆ.

ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧ ಕೃತ್ಯಗಳನ್ನ ತಡೆಯಲು ಶಿಸ್ತು ಕ್ರಮದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಾಲಕಿಯರು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಕ್ಕೆ ಯತ್ನ ಇತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸರ್ಕಾರಿ ಉದ್ಯೋಗ ನಿಷೇಧಿಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. 

ಅಪರಾಧ ಹಿನ್ನೆಲೆ ಉಳ್ಳವರನ್ನು ಪತ್ತೆ ಮಾಡಲು ಪೊಲೀಸ್ ಠಾಣೆಗಳಲ್ಲಿ ದಾಖಲೆಗಳನ್ನ ಪರಿಶೀಲಿಸಲಾಗುತ್ತಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳ ಕುರಿತು ಬಿಜೆಪಿ ಆಡಳಿತ ಕಾಂಗ್ರೆಸ್ ಪಕ್ಷದ ಮೇಲೆ ಟೀಕಾ ಪ್ರಹಾರ ನಡೆಸುತ್ತಿರುವ ನಡುವೆ ಸರ್ಕಾರ ಈ ಘೋಷಣೆ ಮಾಡಿದೆ.

ಇದೇ ಆಗಸ್ಟ್ 2ರಂದು ಬಿಲ್ವಾರ ಜಿಲ್ಲೆಯ ಕಲ್ಲಿದ್ದಲು ಕುಲುಮೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಅತ್ಯಾಚಾರ ಎಸಗಿದ ಬಳಿಕ ಬಾಲಕಿಯನ್ನ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿ 7 ಜನರನ್ನ ಬಂಧಿಸಲಾಗಿದೆ. ಈ ಪ್ರಕರಣದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಅಪರಾಧ ಕೃತ್ಯ ಹಿನ್ನೆಲೆ ಉಳ್ಳವರಿಗೆ ಸರ್ಕಾರಿ ಉದ್ಯೋಗ ನೀಡದಂತೆ ಸೂಚಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹನಿಮೂನ್ಗೆ ಬಂದು ಪತಿಯನ್ನು ಬಿಟ್ಟು ಹೋದ ಪತ್ನಿ! ಕಾರಣ ಕೇಳಿದ್ರೆ ಶಾಕ್ ಆಗ್ತೀರಾ?