ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

Krishnaveni K
ಬುಧವಾರ, 30 ಜುಲೈ 2025 (10:00 IST)

ಬೆಂಗಳೂರು: ಐಟಿ ಉದ್ಯೋಗಿಗಳ ಕೆಲಸದ ಅವಧಿಯನ್ನು ಹೆಚ್ಚಿಸುವ ಸರ್ಕಾರದ ನಿರ್ಧಾರಕ್ಕೆ ನೌಕರರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಈಗ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಐಟಿ ಉದ್ಯೋಗಿಗಳ ಕೆಲಸದ ಅವಧಿಯನ್ನು 12 ಗಂಟೆಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಸರ್ಕಾರ ಮುಂದಿಟ್ಟಿತ್ತು. ಈ ಬಗ್ಗೆ ಸರ್ಕಾರ ನಿಯಮ ರೂಪಿಸಲೂ ಮುಂದಾಗಿತ್ತು. ಆದರೆ ಇದರ ಬೆನ್ನಲ್ಲೇ ನೌಕರರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಪ್ರತಿಭಟನೆಗಳೂ ನಡೆದವು.

ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ ತೀವ್ರ ಪ್ರತಿಭಟನೆ ನಡೆಸಿತ್ತು. ಇದಕ್ಕೆ ಮಣಿದ ಸರ್ಕಾರ ಈಗ 12 ಗಂಟೆ ಕೆಲಸದ ಅವಧಿ ಯೋಜನೆಯನ್ನು ಕೈ ಬಿಡಲು ತೀರ್ಮಾನಿಸಿದೆ. ನೌಕರರ ಬೇಡಿಕೆ ಪರಿಗಣಿಸಿ ಬದಲಾವಣೆ ಕೈ ಬಿಟ್ಟಿರುವುದಾಗಿ ಕಾರ್ಮಿಕ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ 2025 ಭಾಗವಾಗಿರುವ ಪ್ರಸ್ತಾವಿತ ತಿದ್ದುಪಡಿಯಲ್ಲಿ 1961 ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗಳನ್ನು ಪರಿಷ್ಟಕರಿಸಲು ಮುಂದಾಗಿತ್ತು. ಆದರೆ ಈಗ ಆ ಪ್ರಸ್ತಾವನೆಯನ್ನು ಕೈ ಬಿಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ: 490 ಕೋಟಿ ಅನುದಾನ ಮೀಸಲು

ಬೆಂಗಳೂರಿನ ಟ್ರಾಫಿಕ್ ಆಡಿಕೊಂಡು ಲೇವಡಿ ಮಾಡಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಕರ್ನಾಟಕದ ಮತ್ತೊಂದು ಕೇರಳ ಪ್ರೀತಿ: ಕೇರಳದಿಂದ ಟೆಂಡರ್ ಇಲ್ಲದೇ ಟ್ರಾನ್ಸ್ ಫಾರ್ಮರ್ ಗೆ ಆರ್ಡರ್ ಆರೋಪ

ಕೇರಳಕ್ಕೆ ರಾಹುಲ್ ಗಾಂಧಿ ಘೋಷಿಸಿದ ಪಂಚ ಗ್ಯಾರಂಟಿಗಳು ಏನೆಲ್ಲಾ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments