Select Your Language

Notifications

webdunia
webdunia
webdunia
webdunia

ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ ಸರ್ಕಾರ

ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಿದ ಸರ್ಕಾರ
ಬೆಂಗಳೂರು , ಶನಿವಾರ, 20 ಆಗಸ್ಟ್ 2022 (10:17 IST)
ಬೆಂಗಳೂರು: ಭಾರೀ ವಿವಾದಕ್ಕೆ ಕಾರಣವಾಗಿದ್ದ, 2022ರ ರೋಹಿತ್ ಚಕ್ರತೀರ್ಥ ಸಮಿತಿಯ ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಿತ ಪಠ್ಯಗಳನ್ನು ಸರ್ಕಾರ ಹೊಸದಾಗಿ ಪರಿಷ್ಕರಣೆ ಮಾಡಿದೆ.

ಸರ್ಕಾರ ಆದೇಶದಂತೆ ಎಂಟು ಪಠ್ಯಗಳನ್ನು ಹೊಸದಾಗಿ ಪರಿಷ್ಕರಣೆ ಮಾಡಿ ಇಲಾಖೆ ವೆಬ್ಸೈಟ್ಗೆ ಅಪ್ಲೋಡ್ ಮಾಡಿದೆ.

ಕನ್ನಡ ಮತ್ತು ಇಂಗ್ಲೀಷ್ ಆವೃತ್ತಿಯ 59 ಪುಟಗಳ ಪರಿಷ್ಕೃತ ಪಠ್ಯ ಬಿಡುಗಡೆ ಮಾಡಲಾಗಿದೆ. 6,7,9ನೇ ತರಗತಿಯ ಸಮಾಜ ವಿಜ್ಞಾನದ ಪಠ್ಯಗಳು, 7ನೇ ತರಗತಿಯ ಕನ್ನಡ ಭಾಷೆಯ ಪದ್ಯ ಮತ್ತು 4ನೇ ತರಗತಿಯ ಪರಿಸರ ಅಧ್ಯಯನ ಒಂದು ಪಠ್ಯ ಪರಿಷ್ಕರಣೆ ಮಾಡಲಾಗಿದೆ.

ನಮ್ಮ ಸಂವಿಧಾನ, ಭಕ್ತಿ ಪಂಥ ಹಾಗೂ ಸೂಫಿ ಪರಂಪರೆ, ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ, ಮೈಸೂರು ಮತ್ತು ಇತರ ಸಂಸ್ಥಾನಗಳು, ಭಾರತದ ಮತ ಪ್ರವರ್ತಕರು, ಕರ್ನಾಟಕ ರಾಜ್ಯ ಏಕೀಕರಣ ಮತ್ತು ಗಡಿ ವಿವಾದಗಳು, ಪ್ರತಿಯೊಬ್ಬರ ವಿಶಿಷ್ಟ, ಗೊಂಬೆ ಕಲಿಸುವ ನೀತಿ ಪಠ್ಯಗಳನ್ನು ಪರಿಷ್ಕರಣೆ ಮಾಡಲಾಗಿದೆ.

ಶೀಘ್ರವೇ ಶಾಲೆಗಳಿಗೆ ಹೊಸ ಪರಿಷ್ಕರಣೆ ಪಠ್ಯ ರವಾನೆ ಮಾಡಲಾಗುತ್ತದೆ. ಹೊಸ ಪರಿಷ್ಕೃತ ಪಠ್ಯವನ್ನೇ ಬೋಧನೆ ಮಾಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಬಿಐ ಅಧಿಕಾರಿಗಳಂತೆ ನಟಿಸಿ ಹಣ ವಸೂಲಿ!