Select Your Language

Notifications

webdunia
webdunia
webdunia
webdunia

‘ಕೋವಿಡ್ ನಿಂದ ಬಲಿಯಾದ ಕುಟುಂಬಗಳಿಗೆ 1 ಲಕ್ಷ ಪರಿಹಾರ' ಆದೇಶ ವಾಪಸ್ ಪಡೆದ ಸರ್ಕಾರ

‘ಕೋವಿಡ್ ನಿಂದ ಬಲಿಯಾದ ಕುಟುಂಬಗಳಿಗೆ 1 ಲಕ್ಷ ಪರಿಹಾರ' ಆದೇಶ ವಾಪಸ್ ಪಡೆದ  ಸರ್ಕಾರ
ಬೆಂಗಳೂರು , ಬುಧವಾರ, 29 ಸೆಪ್ಟಂಬರ್ 2021 (11:21 IST)
ಬೆಂಗಳೂರು  : ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ 1 ಲಕ್ಷ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ. ಎಸ್ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಿಪಿಎಲ್ ಕುಟಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ರೂ ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರದಿಂದ ಅರ್ಹ ಸಂತ್ರಸ್ತ ಕುಟುಂಬದ ವಾರಸುದಾರರಿಗೆ ನೀಡಲು ಸರ್ಕಾರ ಆದೇಶಿಸಿತ್ತು.
ಏತನ್ಮಧ್ಯೆ, ಕೋವಿಡ್ 19 ವೈರಾಣು ಸೋಂಕಿನಿಂದಾಗಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ರೂ 50,000 ರೂಗಳ ಪರಿಹಾರವನ್ನು ನೀಡಲು ಅನುಮತಿ ನೀಡಲಾಗಿರುತ್ತದೆ. ಈ ಹಿನ್ನೆಲೆ ಕೇಂದ್ರ ಗೃಹ ಮಂತ್ರಾಲಯದ ನಿರ್ದೇಶನದಂತೆ ಪರಿಷ್ಕ್ರತ ಮಾರ್ಗಸೂಚಿ ಹೊರಡಿಸಬೇಕಾಗಿರುವುದರಿಂದ ಈ ಹಿಂದೆ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ.
ಮುಂದುವರೆದು, ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ಅರ್ಹ ನ್ಯಾಯಬದ್ಧ ವಾರಸುದಾರರಿಗೆ ರೂ.50,000 ರೂಗಳ ಕೋವಿಡ್19 ಮರಣ ಪರಿಹಾರ ನೀಡಲು ರಾಜ್ಯ ಸರ್ಕಾರದಿಂದ ಪರಿಷ್ಕ್ರತ ಮಾರ್ಗಸೂಚಿ ಹೊರಡಿಸಬೇಕಾಗಿರುವುದರಿಂದ ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರರಿಗೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಿಂದ ಚೆಕ್ ಮೂಲಕ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ನೀಡಿದ್ದ ಅನುಮತಿ ಆದೇಶವನ್ನು ಯಥಾವತ್ತಾಗಿ ಹಿಂಪಡೆಯಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಆಯುಧಪೂಜೆ ವೇಳೆಗೆ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ:ಡಿ.ಕೆ.ಶಿವಕುಮಾರ್