Select Your Language

Notifications

webdunia
webdunia
webdunia
webdunia

ವಿದೇಶಿ ವಿದ್ಯಾರ್ಥಿಗಳ ಮೇಲೆ ಹದ್ದಿನ ಕಣ್ಣಿಡಲು ಡಿವಿಎಸ್ ಒತ್ತಾಯ

ವಿದೇಶಿ ವಿದ್ಯಾರ್ಥಿಗಳ ಮೇಲೆ ಹದ್ದಿನ ಕಣ್ಣಿಡಲು ಡಿವಿಎಸ್ ಒತ್ತಾಯ
ಬೆಂಗಳೂರು , ಶುಕ್ರವಾರ, 5 ಫೆಬ್ರವರಿ 2016 (19:54 IST)
ತಾಂಜೇನಿಯಾ ಮಹಿಳೆ ಮೇಲೆ ಹಲ್ಲೆ ನಡೆದ ಪ್ರಕರಣದ ನಂತರ ವಿದೇಶಿ ವಿದ್ಯಾರ್ಥಿಗಳ ಮೇಲೆ ಹದ್ದಿನಕಣ್ಣಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ವಿಶೇಷ ತಂಡವನ್ನು ರಚಿಸಬೇಕು ಎಂದು ಕೇಂದ್ರ ಕಾನೂನು ಖಾತೆ ಸಚಿವ ಡಿ.ವಿ.ಸದಾನಂದಗೌಡ ಒತ್ತಾಯಿಸಿದ್ದಾರೆ.
  
ವಿದೇಶಿ ವಿದ್ಯಾರ್ಥಿಗಳ ಅಸಭ್ಯ ವರ್ತನೆ ಕುರಿತಂತೆ ಸ್ಥಳೀಯರು ನೀಡಿದ ದೂರುಗಳ ಬಗ್ಗೆ ಸರಕಾರ ಗಮನಹರಿಸಿಲ್ಲ. ರವಿವಾರದಂದು ರಾತ್ರಿ ತಾಂಜೇನಿಯಾ ಯುವತಿಯ ಮೇಲೆ ನಡೆದ ಹಲ್ಲೆಯ ಸತ್ಯಾಂಶವನ್ನು ಪತ್ತೆಹಚ್ಚಲು ಕೇಂದ್ರ ಸರಕಾರ ಮಧ್ಯಪ್ರವೇಶಿಸಬೇಕು ಎಂದರು. 
 
ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಾಗಿರುವ ಮುಗ್ದ ವ್ಯಕ್ತಿಗಳನ್ನು ಬಂಧಿಸಲಾಗುತ್ತಿದೆ ಎನ್ನುವ ಸ್ಥಳೀಯರ ಅಭಿಪ್ರಾಯಗಳನ್ನು ಸರಕಾರ ಗಣನೆಗೆ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
 
ಒಂದು ವೇಳೆ, ರಾಜ್ಯ ಸರಕಾರ ಕಾನೂನು ಸುವ್ಯವಸ್ಥೆಯನ್ನು ನಿಯಂತ್ರಿಸಲು ವಿಫಲವಾದಲ್ಲಿ ಮುಂಬರುವ ದಿನಗಳಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ವಿದೇಶಿ ವಿದ್ಯಾರ್ಥಿಗಳ ಮೇಲೆ ಹದ್ದಿನಕಣ್ಣಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ವಿಶೇಷ ತಂಡವನ್ನು ರಚಿಸಬೇಕು ಎಂದು ಹೇಳಿದ್ದಾರೆ.
 
ಕೆಲವರ ವೀಸಾ ಅವಧಿ ಕೂಡಾ ಮುಕ್ತಾಯವಾಗಿದ್ದರೂ ಹೆಸರುಘಟ್ಟ ಬಡಾವಣೆಯಲ್ಲಿ ಸಾವಿರಕ್ಕೂ ಹೆಚ್ಚು ವಿದೇಶಿ ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಅವರ ದೇಶಕ್ಕೆ ಮರಳಿ ಕಳುಹಿಸಬೇಕು ಎಂದು ಕೇಂದ್ರ ಸಚಿವ ಸದಾನಂದಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದ್ದಾರೆ.

Share this Story:

Follow Webdunia kannada