Publish Date: Thu, 20 Jul 2017 (13:41 IST)
Updated Date: Thu, 20 Jul 2017 (13:45 IST)
ಜೆಡಿಎಸ್ ಮಹಿಳಾ ಸಮಾವೇಶದಲ್ಲಿ ಪಕ್ಷದ ವರಿಷ್ಠ ದೇವೇಗೌಡರ ಸೊಸೆಯರೇ ಗೈರು ಹಾಜರಾಗಿರುವುದು ಕಂಡು ಬಂದಿದೆ ಎಂದು ಮೂಲಗಳು ತಿಳಿಸಿವೆ.
ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ಜೆಡಿಎಸ್ ಮಹಿಳಾ ಸಮಾವೇಶಕ್ಕೆ ಗೌಡರ ಸೊಸೆಯಂದಿರಾದ ಅನಿತಾ ಕುಮಾರಸ್ವಾಮಿ ಮತ್ತು ಭವಾನಿ ರೇವಣ್ಣ ಗೈರುಹಾಜರಾಗಿದ್ದಾರೆ.
ಟಿಕೆಟ್ ಆಕಾಂಕ್ಷಿಗಳಾಗಿರುವ ಇಬ್ಬರೂ ಜೆಡಿಎಸ್ ಪಕ್ಷವೇ ಆಯೋಜಿಸಿದ ಮಹಿಳಾ ಸಮಾವೇಶಕ್ಕೆ ಗೈರುಹಾಜರಾಗಿರುವುದು ಪಕ್ಷದ ವರಿಷ್ಛರಲ್ಲಿ ಭಿನ್ನಮತ ಎದುರಾಗಿದೆಯೇ ಎನ್ನುವ ಅನುಮಾನಕ್ಕೂ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿರುವ ಅನಿತಾ ಕುಮಾರಸ್ವಾಮಿ, ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಭವಾನಿ ರೇವಣ್ಣ ಚುನಾವಣೆಯಲ್ಲಿ ಟಿಕೆಟ್ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸಮಾವೇಶಕ್ಕೆ 11 ಗಂಟೆಗೆ ಆಗಮಿಸಬೇಕಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 12.45 ಗಂಟೆಗೆ ಆಗಮಿಸಿದರು. ಕುಮಾರಸ್ವಾಮಿ ಆಗಮಿಸುತ್ತಿದ್ದಂತೆ ಸಮಾವೇಶಕ್ಕೆ ಚಾಲನೆ ನೀಡಲಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.