Select Your Language

Notifications

webdunia
webdunia
webdunia
webdunia

ಪದವೀಧರ ಕ್ಷೇತ್ರದ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕೆ.ಸ್.ಭಗವಾನ್ ನಾಮಪತ್ರ ಸಲ್ಲಿಕೆ

ಪದವೀಧರ ಕ್ಷೇತ್ರದ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕೆ.ಸ್.ಭಗವಾನ್ ನಾಮಪತ್ರ ಸಲ್ಲಿಕೆ
ಬೆಂಗಳೂರು , ಶುಕ್ರವಾರ, 20 ಮೇ 2016 (18:24 IST)
ಪದವೀಧರರ 4 ಕ್ಷೇತ್ರಗಳಿಂದ ವಿಧಾನ ಪರಿಷತ್‌‌ಗೆ ನಡೆಯಲಿರುವ ಚುನಾವಣೆಗೆ ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ನಾಮಪತ್ರ ಸಲ್ಲಿಸಿದ್ದಾರೆ.
ಕಳೆದ ವಾರದಿಂದ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳುತ್ತಿದ್ದ ಭಗವಾನ್, ಇಂದು ದಕ್ಷಿಣ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
 
ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ಅವರಿಗೆ ಚುನಾವಣೆ ನಾಮಪತ್ರ ಸಲ್ಲಿಕೆ ಮಾಡದಂತೆ, ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದರಂತೆ. ಆದರೆ ಇದು ನನ್ನ ಮೊದಲ ಹಾಗೂ ಕೊನೆಯ ಚುನಾವಣೆ ಹಾಗಾಗಿ ನನ್ನನ್ನು ಬೆಂಬಲಿಸಿ ಎಂದು ಅವರಲ್ಲಿ ಕೇಳಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
 
ಪದವೀಧರರ 4 ಕ್ಷೇತ್ರಗಳಿಂದ ವಿಧಾನ ಪರಿಷತ್‌‌ಗೆ ನಡೆಯಲಿರುವ ಚುನಾವಣೆಯಲ್ಲಿ ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ಕಣಕ್ಕಿಳಿಯುತ್ತಿರುವ ಹಿನ್ನೆಲೆಯಲ್ಲಿ ಬಿಜಿಪಿ ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್ "ದೇವರನ್ನು ದೆವ್ವಗಳೇ ಕಾಪಾಡಬೇಕು" ಹೇಳಿಕೆಗೆ ಪ್ರತಿಕ್ರಿಯಿಸಿದ ಭಗವಾನ್, ಪದವೀಧರ ಮತದಾರರನ್ನು ದೆವ್ವಕ್ಕೆ ಹೋಲಿಸಿ ಮಧುಸೂದನ್ ಅವಮಾನಿಸಿದ್ದಾರೆ ಎಂದು ತೀರುಗೇಟು ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಆಕಾಶವಾಣಿ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಸಂವಾದ ಕಾರ್ಯಕ್ರಮ