Webdunia - Bharat's app for daily news and videos

Install App

ನಾಮಪತ್ರ ಸಲ್ಲಿಸಿದ ಮರುದಿನವೇ ಅಭ್ಯರ್ಥಿ ವಿರುದ್ಧ ಕೇಸ್

Webdunia
ಬುಧವಾರ, 7 ಅಕ್ಟೋಬರ್ 2020 (17:15 IST)
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಯೊಬ್ಬರ ವಿರುದ್ಧ ಕೇಸ್ ದಾಖಲಾಗಿದೆ. 
ಅಭ್ಯರ್ಥಿ ಸಲ್ಲಿಸಿರುವ ನಾಮಪತ್ರದಲ್ಲಿ ಸೂಚಕರ ಸಹಿ ನಕಲಿ ಮಾಡಿರುವುದು ಪತ್ತೆಯಾಗಿದ್ದು, ಕೇಸ್ ದಾಖಲಾಗಿದೆ.

ರವಿ ಶಿವಪ್ಪ ಪಡಸಲಗಿ ಎಂಬುವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಸೂಚಕರಾಗಿ ಸಹಿ ಮಾಡಿರುವ 10 ಮಂದಿಯ ಸಹಿಗಳು ನಕಲಿ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ.

ರವಿ ಪಡಸಲಗಿ ಮೂಲತಃ ಬೆಂಗಳೂರು ಭಾಗದವರಾಗಿದ್ದಾರೆ. ಇವರು ಸೂಚಕರ ಅನುಮತಿ ಪಡೆಯದೇ, ಮತದಾರರ ಪಟ್ಟಿಯಲ್ಲಿರುವ ಸವಣೂರ ತಾಲ್ಲೂಕಿನ 10 ಮತದಾರರ ಹೆಸರು ಹಾಗೂ ಸಹಿಯನ್ನು ದುರ್ಬಳಕೆ ಮಾಡಿಕೊಂಡು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಪರಿಶೀಲನೆ ಸಂದರ್ಭ ಸಂಶಯ ಬಂದ ಕಾರಣ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಯೋಗೇಶ್ವರ ಅವರು ಸವಣೂರಿಗೆ ಭೇಟಿ ನೀಡಿ, ಸೂಚಕರ ಸಹಿ ಇದ್ದ ನಾಲ್ವರನ್ನು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಮಾಹಿತಿ ನೀಡಿದ್ದಾರೆ.

ರವಿ ಪಡಸಲಗಿ ಎಂಬುವರು ನಮಗೆ ಪರಿಚಯವೇ ಇಲ್ಲ. ನಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಸೂಚಕರಾಗಿ ನಮೂದಾಗಿರುವ ನಾಲ್ವರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ. 
ಈ ಸಂಬಂಧ ಸವಣೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments