Select Your Language

Notifications

webdunia
webdunia
webdunia
webdunia

ಶೀರ್ಘವೇ ಪದವಿ ಕಾಲೇಜು ದಾಖಲಾತಿ ಆರಂಭ: ಅಶ್ವಥ್ ನಾರಾಯಣ

ಶೀರ್ಘವೇ ಪದವಿ ಕಾಲೇಜು ದಾಖಲಾತಿ ಆರಂಭ: ಅಶ್ವಥ್ ನಾರಾಯಣ
ಬೆಂಗಳೂರು , ಮಂಗಳವಾರ, 5 ಜುಲೈ 2022 (07:26 IST)
ಬೆಂಗಳೂರು: ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ತಿಳಿಸಿದ್ದಾರೆ.
 
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಎಲ್ಲವೂ ಆನ್ ಲೈನ್ ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು ಸಿಂಗಲ್ ಲಾಗಿನ್ ನಿಂದಲೇ ಯಾವ ಕಾಲೇಜಿಗೆ ಬೇಕಾದರೂ ಅರ್ಜಿ ಹಾಕಬಹುದು ಎಂದು ಮಾಹಿತಿ ನೀಡಿದರು.

ಅರ್ಜಿ ಹಾಕಲು ಬೇರೆ ಬೇರೆ ಸಂಸ್ಥೆಗಳಿಗೆ ಓಡಾಡುವ ಅಗತ್ಯ ಇಲ್ಲ. ಪಿಯುಸಿ ನಂಬರ್ ಹಾಕಿದರೆ ಆಂಕಪಟ್ಟಿಗೆ ಸಂಬಂಧಿಸಿದ ಮಾಹಿತಿ ಸಿಗಲಿದೆ. ಉಳಿದಂತೆ, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಇತ್ಯಾದಿಗಳು ಕೂಡ ಆಧಾರ್ ದೃಢೀಕರಣದಿಂದ ಸಿಗಲಿವೆ ಎಂದು ಸಚಿವರು ವಿವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಣಿತ ನೋಟ್ಸ್ ತರದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ