ಗ್ರಾಮ ಪಂಚಾಯತ್ ಅಧ್ಯಕ್ಷನಿಂದ ಡಿ ಗ್ರೂಪ್ ನೌಕರಸ್ಥೆಯ ಮೇಲೆ ಅತ್ಯಾಚರ ಪ್ರಯತ್ನ ನಡೆದಿರುವಂತಹ ಹೇಯ ಕೃತ್ಯ ಮಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮ ಪಂಚಾಯತಿ ಕಛೇರಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಆತ್ಯಾಚಾರಕ್ಕೆ ಯತ್ನಿಸಿದ ಕಾಮುಕ ಎಂದು ತಿಳಿದುಬಂದಿದೆ. ಕಳೆದ ಆರು ವರ್ಷಗಳ ಹಿಂದೆ, ಗಂಡನನ್ನು ಕಳೆದುಕೊಂಡು ಸರಕಾರದ ಅನುಕಂಪದ ಮೇಲೆ ಡಿ ಗ್ರೂಪ್ ನೌಕರಿಗೆ ಸೇರಿರುವ ವಿಧವೆ ಮಹಿಳೆ, ನಿನ್ನೆ ಸಾಯಂಕಾಲ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ಸಂದರ್ಭದಲ್ಲಿ ಕಾಮುಕ ಅಧ್ಯಕ್ಷ ಚಂದ್ರಹಾಸ್ ವಿಧವೆ ನೌಕರಸ್ಥೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.
ಗ್ರಾಮ ಪಂಚಾಯತ್ ಕಛೇರಿಯಲ್ಲಿ ವಿಧವೆ ನೌಕರಸ್ಥೆಯನ್ನು ಬಲವಂತವಾಗಿ ತನ್ನ ಕೊಠಡಿಗೆ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಕಾಮುಕನ ಈ ನೀಚ ಕೃತ್ಯ ಕಛೇರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧ್ಯಕ್ಷ ಚಂದ್ರಹಾಸ್‌ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.