ಪಿಡಿಒನನ್ನು ಥಳಿಸಿದ ಗ್ರಾಮ‌ ಪಂಚಾಯತ್ ಮಹಿಳಾ ಸದಸ್ಯರು!

Webdunia
ಮಂಗಳವಾರ, 29 ಜನವರಿ 2019 (17:13 IST)
ಪಿಡಿಒ ಮೇಲೆ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆಯರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸೋಮನಹಳ್ಳಿ ಗ್ರಾಮ‌ ಪಂಚಾಯತ್ ನಲ್ಲಿ ಘಟನೆ ನಡೆದಿದೆ. ಗ್ರಾಮ‌ ಪಂಚಾಯತ್ ಪ್ರಭಾರ ಪಿಡಿಒ ಜಯಪ್ಪ ಮೇಲೆ ಹಲ್ಲೆ ನಡೆಸಲಾಗಿದೆ. ವಸತಿ ಯೋಜನೆ ಅನುದಾನ ವಿಚಾರ ಸಂಬಂಧ ಹಲ್ಲೆ ಮಾಡಲಾಗಿದೆ.

ಗ್ರಾಮ ಪಂಚಾಯತ್ ಕಚೇರಿಯಲ್ಲಿಯೇ ಪಿಡಿಒ‌ ಶರ್ಟ್  ಕಾಲರ್ ಹಿಡಿದು ಎಳೆದಾಡಿದ್ದಾರೆ ಮಹಿಳಾ ಸದಸ್ಯರಾದ
ಲಲಿತಾ, ನಾಗಮ್ಮ ಎಂಬುವರು. ಶರ್ಟ್ ಕಾಲರ್ ಹಿಡಿದು ಹಲ್ಲೆ‌ಮಾಡಲು ಮುಂದಾದ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗ್ರಾಮ‌ ಪಂಚಾಯತ್ ಕಚೇರಿಯಿಂದ ಹೊರ ಬಂದ ಕೂಡಲೇ ಮಹಿಳಾ ಸದಸ್ಯರ ಗಂಡಂದಿರಿಂದಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮಹಿಳಾ ಸದಸ್ಯರ ಗಂಡಂದಿರಾದ ಅಣ್ಣಪ್ಪ ನಾಯ್ಕ್, ಪಾಂಡು ಎಂಬುವರಿಂದ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಪಿಡಿಒ ಜಯಪ್ಪ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಪ್ರಕರಣ ಸಂಬಂಧ ಐದು ಜನರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments