Select Your Language

Notifications

webdunia
webdunia
webdunia
webdunia

ನಗರದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅದ್ದೂರಿ ಚಾಲನೆ

ನಗರದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅದ್ದೂರಿ ಚಾಲನೆ
bangalore , ಬುಧವಾರ, 30 ಆಗಸ್ಟ್ 2023 (19:10 IST)
ಗೃಹಲಕ್ಷ್ಮಿಗೆ ಚಾಲನೆಗೆ 198 ವಾರ್ಡಗಳಲ್ಲೂ ಕೂಡ ಉದ್ಘಾಟನೆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಣೆ ಮಾಡಲು ಬಿಬಿಎಂಪಿ ಪ್ರತಿ ವಾರ್ಡ್ ಗಳಲ್ಲಿಯೂ ಸಿದ್ಧತೆ ಮಾಡಿಕೊಂದಿತ್ತು. ಎಲ್ಇಡಿ ಸ್ಕ್ರೀನ್ ಗಳನ್ನ ಅಳವಡಿಸಿ ಬಂದವರಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಿಕೊಡಲಾಗಿತ್ತು. ಇನ್ನು ಹಲವಡೆ ಶಾಮಿಯಾನ ಹಾಕಿ ರಂಗೋಲಿ ಬಿಡಿಸಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ರೆ, ನಗರದಲ್ಲೇಡೆ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಮುಖ್ಯ ಕಾರ್ಯಕ್ರಮವನ್ನು ಟೌನ್ ಹಾಲ್ ಬಳಿ ಆಯೋಜಿಸಲಾಗಿದ್ದು, ಟೌನ್ ಹಾಲ್ ಬಳಿ ಬಂದ ಮಹಿಳೆಯರಿಗೆ ಹೂಗಳನ್ನ ನೀಡುವ ಮೂಲಕ ಸ್ವಾಗತ ಕೋರಲಾಯಿತು. ಇನ್ನೂ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಈ ಯೋಜನೆಇದಾಗಿದ್ದು, ಕಾರ್ಯಕ್ರಮಕ್ಕೆ ಚಾಲನೆ  ಸಿಕ್ಕ ಬಳಿಕ ಮಹಿಳೆಯರಿಗೆ ಹಣ ಜಮೆಯಾಗಲಿದೆ.

ಇನ್ನು ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲೂ ಕೂಡ ಉದ್ಘಾಟನೆ ಕಾರ್ಯಕ್ರಮದ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಇನ್ನೂ ಇದೆ ವೇಳೆ  ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಡಾ. ಹರೀಶ್ ಕುಮಾರ್, ಆರ್.ಎಲ್ ದೀಪಕ್, ದಕ್ಷಿಣ ವಲಯ ಜಂಟಿ ಆಯುಕ್ತರಾದ ಡಾ. ಕೆ. ಜಗದೀಶ್ ನಾಯ್ಕ, ಗೃಹಲಕ್ಷ್ಮಿ ಯೋಜನೆಯ ನೋಡಲ್ ಅಧಿಕಾರಿಯಾದ ಲಕ್ಷ್ಮಿದೇವಿ, ಗೃಹಲಕ್ಷ್ಮಿ ಯೋಜನೆ ಸೌಲಭ್ಯದ ಫಲಾನುಭವಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 ಗೃಹಲಕ್ಷ್ಮೀ ಯೋಜನೆಗೆ ಇಂದು ಮೈಸೂರಿನ ಮಹಾರಾಣಿ ಕಾಲೇಜು ಮೈದಾನದಲ್ಲಿ ಅದ್ದೂರಿ ಚಾಲನೆ ಸಿಕ್ಕಿದೆ. ಇನ್ನು ವಿಶೇಷ ವಿಮಾನದ ಮೂಲಕ ದೆಹಲಿಯಿಂದ 12 ಗಂಟೆಗೆ ಬೆಂಗಳೂರಿಗೆ ಆಗಮಿಸಿದ ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿಗೆ ಬಂದಿಳಿದು ಅದೇ ವಿಶೇಷ ವಿಮಾನದ ಮೂಲಕ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ತೆರಳಿ, ಮಹಾರಾಣಿ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಿದ್ದ ಗ್ರಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಏಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಸಿಎಂ ಡಿಕೆ ಶಿವಕುಮಾರ್ ಅದ್ದೂರಿ ಚಾಲನೆ ನೀಡಿದ್ದಾರೆ. ಇನ್ನು ಈ ಒಂದು ಕಾರ್ಯಕ್ರಮದ ನೇರ ವೀಕ್ಷಣೆಗೆ, ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ  198 ವಾರ್ಡ್ಗಳಲ್ಲೂ ಜನರಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ನೋಡೋದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಶಕ್ತಿ ಯೋಜನೆ ಟಿಕೆಟ್ ನೋಡಿ ಮಹಿಳೆಯರಿಗೆ ಶಾಕ್