Select Your Language

Notifications

webdunia
webdunia
webdunia
webdunia

ಬಿಜೆಪಿ ಸೇರ್ಪಡೆಯಾದ ನಂತರ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಎನ್.ಮಹೇಶ್ ಗೆ ಭರ್ಜರಿ ಸ್ವಾಗತ

ಬಿಜೆಪಿ ಸೇರ್ಪಡೆಯಾದ ನಂತರ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಎನ್.ಮಹೇಶ್ ಗೆ ಭರ್ಜರಿ ಸ್ವಾಗತ
bengaluru , ಸೋಮವಾರ, 9 ಆಗಸ್ಟ್ 2021 (19:47 IST)

ಕೊಳ್ಳೇಗಾಲಕ್ಕೆ ಆಗಮಿಸಿದ ಶಾಸಕರ ಮೇಲೆ ಬಿಜೆಪಿ ಕಾರ್ಯಕರ್ತರು ಹಾಗೂ ಮಹೇಶ್ ಬೆಂಬಲಿಗರಿಂದ ಹೂ ಮಳೆ ಸುರಿಸಿ ಸ್ವಾಗತ ಕೋರಲಾಯಿತು.

ಕೊಳ್ಳೇಗಾಲ ಪಟ್ಟಣದ ಅಚ್ಗಳ್ ಸರ್ಕಲ್ ನಿಂದ ಪ್ರವಾಸಿ ಮಂದಿರದ ವರೆಗೆ ಬೈಕ್ ರಾಲಿ ನಡೆಸಲಾಯಿತು. ಕೊಳ್ಳೇಗಾಲದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತೇನೆ ಎಂದರು.

ರಾಜ್ಯದಲ್ಲಿರುವ ನನ್ನ ಬೆಂಬಲಿಗರು ಮತ್ತು ನಾನು ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತೇನೆ. ನಾನು, ನನ್ನ ಬೆಂಬಲಿಗರೊಂದಿಗೆ ಮತ್ತು ಬಿಜೆಪಿ ಮುಖಂಡರೊಂದಿಗೆ ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಸದೃಡಗೊಳಿಸುತ್ತೇನೆ. ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಹಾಗೂ ಬೀದರ್, ಗುಲ್ಬರ್ಗ, ಬೆಳೆಗಾವಿ, ವಿಜಾಪುರ ಜಿಲ್ಲೆಗಳಲ್ಲಿ ಸಂಚಾರ ಮಾಡುತ್ತೇವೆ ಎಂದು ಅವರು ಹೇಳಿದರು.

ನನ್ನ ಬೆಂಬಲಿಗರೊಡನೆ ಬಿಜೆಪಿ ಪಕ್ಷವನ್ನು ಸಂಘಟಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ನನ್ನ ಕೈಯಲ್ಲಿ ಆದಷ್ಟು ಕೆಲಸ ಮಾಡುತ್ತೇನೆ. ನಾನು ಬಿಜೆಪಿ ಪಕ್ಷ ಸೇರ್ಪಡೆಗೊಂಡಿರುವ ವಿಚಾರ ಸರಿಯಾಗಿದೆ.ನನ್ನ ಬೆಂಬಲಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಪಕ್ಷದ ಮುಖಂಡರೊಡನೆ ಹಾಗೂ ನನ್ನ ಬೆಂಬಲಿಗರೊ ಡನೆ ಪಕ್ಷ ಸಂಘಟನೆಯ ಸಂಬಂಧ ಮೂರು ಹಂತಗಳಲ್ಲಿ ಸಭೆ ನಡೆಸಿದ್ದೇನೆ ಎಂದು ಮಹೇಶ್ ವಿವರಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಒಬ್ಬ ವಿದ್ಯಾರ್ಥಿನಿ ಹೊರತುಪಡಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಎಲ್ಲರೂ ಪಾಸ್!