Select Your Language

Notifications

webdunia
webdunia
webdunia
webdunia

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಅನುಕೂಲಕರ : ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡಿದ್ದು ಅನುಕೂಲಕರ : ಬೊಮ್ಮಾಯಿ
ಹಾವೇರಿ , ಗುರುವಾರ, 2 ಫೆಬ್ರವರಿ 2023 (10:50 IST)
ಹಾವೇರಿ : ಕೇಂದ್ರ ಸರ್ಕಾರದ ಬಜೆಟ್ನಲ್ಲಿ ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದನ್ನು ನಾನು ಸ್ವಾಗತ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹರ್ಷ ವ್ಯಕ್ತಪಡಿಸಿದರು.

ಬೆಂಗಳೂರಿನಿಂದ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮಕ್ಕೆ ಆಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾಗಿದೆ.

ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಚ್ಚು ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು. ಹೀಗಾಗಿ 5,300 ಕೋಟಿ ರೂ. ನೀಡಿದ್ದು ಸ್ವಾಗತಾರ್ಹ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಮದ್ಯದಂಗಡಿಗಳನ್ನು ಗೋ ಶಾಲೆಯನ್ನಾಗಿ ಪರಿವರ್ತಿಸುತ್ತೇನೆ : ಉಮಾಭಾರತಿ