Select Your Language

Notifications

webdunia
webdunia
webdunia
webdunia

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಕರ್ನಾಟಕ ಅರಣ್ಯ ಇಲಾಖೆ

Sampriya

ಕಲಬುರಗಿ , ಶನಿವಾರ, 5 ಜುಲೈ 2025 (17:23 IST)
ಕಲಬುರಗಿ: ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಮೂಲಕ ಅರಣ್ಯ ಇಲಾಖೆಯಲ್ಲಿ ಕೆಲಸ  ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ. 

ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲಾಖೆಯಲ್ಲಿ ಈಗಾಗಲೇ 341 ಹುದ್ದೆಗಳ ಭರ್ತಿ ಮಾಡಲಾಗಿದೆ. 540 ಹುದ್ದೆಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಆದಷ್ಟು ಬೇಗ ಎಲ್ಲ ರೀತಿಯ ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಇನ್ನೂ ಚಾಮರಾಜನಗರದಲ್ಲಿ ಹುಲಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂದ ಅಧಿಕಾರಿಗಳ ಅಮಾನತು ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ಮಾಡಿದ್ದರಿಂದಲೇ ಅವರನ್ನು ಅಮಾನತು ಮಾಡುವಂತೆ ಸೂಚನೆ ಕೊಡಲಾಗಿದೆ. 

ಇನ್ನೋರ್ವ ಅಧಿಕಾರಿ ಭಾರತೀಯ ಅರಣ್ಯ ಇಲಾಖೆಯ ಸೇವೆಯ ವ್ಯಾಪ್ತಿಯಲ್ಲಿದ್ದರಿಂದ ಅವರ ಅಮಾನತ್ತಿಗೆ ಸಿಎಂ ಅವರಿಗೆ ಶಿಫಾರಸು ಮಾಡಿದ್ದೇನೆ ಎಂದು ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ದಶಕದ ಬಳಿಕ ನಡೆದ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ ಜಾರಕಿಹೊಳಿ ಪುತ್ರ