ಸಂವಿಧಾನ ದಿನಕ್ಕೆ ಗಣ್ಯರಿಂದ ಶುಭಾಶಯ

Webdunia
ಶನಿವಾರ, 26 ನವೆಂಬರ್ 2022 (15:40 IST)
ಇಂದು ಸಂವಿಧಾನ ದಿನ ಆಚರಣೆ ಹಿನ್ನೆಲೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ​ಸೇರಿದಂತೆ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್​​​ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬೊಮ್ಮಾಯಿಯವರು, 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ , ಸಂವಿಧಾನದ ಕರ್ತೃಗಳನ್ನು ಸ್ಮರಿಸಿ, ಸಂವಿಧಾನಕ್ಕೆ ಸದಾ ಬದ್ಧವಾಗಿರುವ ಸಂಕಲ್ಪವನ್ನು ಮಾಡೋಣ ಎಂದು ಹೇಳಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಟ್ವೀಟ್ ಮಾಡಿ, ಸಮಸ್ತ ನಾಗರಿಕರಿಗೆ ಭಾರತದ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು. ನಾವೆಲ್ಲರೂ ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದಿಂದ ಬದುಕುವಂತೆ ಮಾಡಿರುವ ಸಂವಿಧಾನ ಇದೇ ದಿನ ಅಂಗೀಕಾರವಾಯಿತು. ನಮ್ಮ ಸಂವಿಧಾನದ ಶ್ರೇಷ್ಠತೆ, ಮಹತ್ವ, ಹಕ್ಕು ಹಾಗೂ ಕರ್ತವ್ಯಗಳ ಬಗ್ಗೆ ಹೆಚ್ಚು ಅರಿತುಕೊಳ್ಳೋಣ ಎಂದು ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿ, ಇಂದು ಭಾರತ ಸಂವಿಧಾನ ದಿನ. ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರಿಗೂ ಸಮಾನತೆ ನೀಡಿದ ಪುಣ್ಯದಿನ. ನಮ್ಮ ಸಂವಿಧಾನದ ಆಶಯಗಳನ್ನು ಸದಾ ಸಂರಕ್ಷಿಸುವ ಹಾಗೂ  ಪಾಲಿಸುವ ಕಂಕಣ ತೊಟ್ಟು ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಮಾಡೋಣ ಎಂದು ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿ, ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರಕ್ಕಾಗಿ, ಸಧೃಡ ಭಾರತ ನಿರ್ಮಾಣಕ್ಕಾಗಿ ಭದ್ರ ಅಡಿಪಾಯ ಹಾಕಲು ಸಂವಿಧಾನವನ್ನು ರಚಿಸಿ ಅಂಗೀಕರಿಸಿದ ದಿನವನ್ನು ಇಂದು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ.‌ ಈ ಸಂದರ್ಭದಲ್ಲಿ ಸಂವಿಧಾನದ ರಕ್ಷಣೆಗೆ ನಾವೆಲ್ಲರೂ ಪಣ ತೊಡುವ ಮೂಲಕ ಈ ಸಂಭ್ರಮವನ್ನು ಆಚರಿಸೋಣ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments