Publish Date: Sat, 05 Aug 2023 (16:22 IST)
Updated Date: Sat, 05 Aug 2023 (14:35 IST)
ರಾಜ್ಯದ ಮಹಿಳೆಯರು ಕುತೂಹಲದಿಂದ ನಿರೀಕ್ಷಿಸುತ್ತಿರುವ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯಡಿ 2 ಸಾವಿರ ರೂ. ಪಡೆಯುವುದು ಇನ್ನೂ ಕೆಲದಿನ ವಿಳಂಬವಾಗುವ ಸಾಧ್ಯತೆಯಿದೆ. ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ಕೊಡುವ ಈ ಯೋಜನೆಗೆ ಸ್ವಾತಂತ್ರ್ಯ ದಿನಾಚರಣೆ ಮರುದಿನ ಅಂದರೆ ಆಗಸ್ಟ್ 16ಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿತ್ತು. AICC ನಾಯಕಿ ಸೋನಿಯಾ ಗಾಂಧಿ ಅವರನ್ನು ಕರೆಸಿ ಈ ಮಹತ್ವದ ಯೋಜನೆಗೆ ಚಾಲನೆ ನೀಡಲು ಸರಕಾರ ಬಯಸಿರುವ ಕಾರಣ ಕನಿಷ್ಠ ಒಂದು ವಾರ ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.