Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ಇರುತ್ತೆ

ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ಇರುತ್ತೆ
bangalore , ಸೋಮವಾರ, 28 ಆಗಸ್ಟ್ 2023 (17:20 IST)
ಗೃಹಲಕ್ಷ್ಮಿ ಯೋಜನೆ ನಿರಂತರವಾಗಿ ಇರುತ್ತೆ. ಹಬ್ಬದ ವಾತಾವರಣವನ್ನ ನಮ್ಮ ಮಹಿಳೆಯರು ಸೃಷ್ಟಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಐದು ಗ್ಯಾರಂಟಿಗಳಲ್ಲಿ ಬಹಳಷ್ಟು ಸದ್ದು ಮಾಡ್ತಾ ಇರೋದು ಭಾಗ್ಯಲಕ್ಷ್ಮಿ ಯೋಜನೆ. ರಾಜ್ಯದ 13 ಸಾವಿರ ಕಡೆ ಈ ಕಾರ್ಯಕ್ರಮ ಮಾಡ್ತಾ ಇದ್ದೇವೆ. ಆಗಸ್ಟ್​ 30ರಂದು ಮೈಸೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡ್ತಾ ಇದ್ದೇವೆ. ಮೈಸೂರಿನ ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನ ಸೇರುವ ಸಾಧ್ಯತೆ ಇದೆ. ರಾಜ್ಯದ ಎಲ್ಲ ಮಹಿಳೆಯರು ಅತ್ಯುತ್ಸಾಹದಿಂದ ಯೋಜನೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯಾದ್ಯಂತ 1.11 ಕೋಟಿ ಜನ ಗೃಹಲಕ್ಷ್ಮಿಗೆ ಅರ್ಜಿ ನೋಂದಣಿ ಆಗಿದೆ. ಅರ್ಜಿ ಸಲ್ಲಿಸಲು ಟೈಮ್ ಲಿಮಿಟ್ ಇಲ್ಲ. ಮುಂದಿನ ಬಾರಿಯೂ ನಮ್ಮ ಸರ್ಕಾರ ಬಂದರೆ ಯೋಜನೆ ಮುಂದುವರಿಯಲಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಸೋಮಶೇಖರ್​​ ಗೃಹಲಕ್ಷ್ಮಿ ಪೂರ್ವಭಾವಿ ಸಭೆ