Publish Date: Sun, 16 Jul 2023 (07:30 IST)
Updated Date: Sat, 15 Jul 2023 (23:30 IST)
ಬೆಂಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಸೂಕ್ತ ರೀತಿಯಲ್ಲಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಚಾಲನೆ ಸಿಗಲಿದೆ. ಅಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಕಾಸಸೌಧದಲ್ಲಿ ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಚಿವರು ವಿಡಿಯೋ ಸಂವಾದ ನಡೆಸಿದರು.