Daily Horoscope
✕

ಪ್ರೀವೆಡ್ಡಿಂಗ್ ಶೂಟಿಂಗ್‌ಗೆ ತೆರಳುತ್ತಿದ್ದಾಗ ರಸ್ತೆ ಅಪಘಾತ, ವರ ಸಾವು

Webdunia
ಗುರುವಾರ, 30 ಏಪ್ರಿಲ್ 2026 (15:20 IST)
ಹಾಸನ: ಪ್ರೀವೆಡ್ಡಿಂಗ್ ಶೂಟ್‌ಗೆ ತೆರಳಿದ್ದ ವೇಳೆ ಕೆಲವು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇನ್ನೇನು ಹಸೆಮಣೆ ಏರಬೇಕಿದ್ದ ಯುವಕ  ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದಲ್ಲಿ ವರದಿಯಾಗಿದೆ. 

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದಾರೆ. 

ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ ಮನು ಅವರ ಮದುವೆ ನಿಶ್ಚಯವಾಗಿತ್ತು. ಆಲೂರು ಬೈರಾಪುರ ರಸ್ತೆಯಲ್ಲಿರುವ ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಮದುವೆ ನಿಗದಿಯಾಗಿತ್ತು. 

ಇನ್ನೂ ಮದುವೆಗೆ 2 ಕುಟುಂಬಗಳಲ್ಲೂ ಭರದಿಂದ ಸಿದ್ಧತೆ ನಡೆಯುತ್ತಿದ್ದು, ಇಂದು ಬೆಳಗ್ಗೆ ಮನು ಅವರು ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ ವಧುವನ್ನು ಕರೆತರಲು ವಿಟಾರಾ ಬ್ರೆಝಾ ಕಾರಿನಲ್ಲಿ ಒಬ್ಬರೇ ಹೊರಟಿದ್ದಾರೆ. 

ಕಾರು ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ತಲುಪಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಮನು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. 

ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಬದುಕೇ ನಮಗೆ ಪಾಠ ಶಾಲೆ: ಬಿಕೆ ಹರಿಪ್ರಸಾದ್

Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಇಂದು ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಇಳಿಕೆ

ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಿದ್ದರಾಮಯ್ಯಗೆ ಹಿಂಬದಿ ಸೀಟು ಯಾಕೆ

ಮನೆ ಕಟ್ಟುವಾಗ ಸಿಕ್ತು 13 ಅಡಿ ಉದ್ದದ ಬೃಹತ್ ಕಾಳಿಂಗ: Video

ಮುಂದಿನ ಸುದ್ದಿ
Show comments