Select Your Language

Notifications

webdunia
webdunia
webdunia
webdunia

ಜಿ.ಎಸ್.ಟಿ. ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ

ಜಿ.ಎಸ್.ಟಿ. ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ
bangalore , ಮಂಗಳವಾರ, 8 ಫೆಬ್ರವರಿ 2022 (20:43 IST)
ರಾಜ್ಯಗಳಿಗೆ ಕೇಂದ್ರ ಸರಕಾರ ನೀಡುವ ಜಿಎಸ್ ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.
ಎರಡು ದಿನಗಳ ಹೊಸದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ಇಂದು ಹಣಕಾಸು ಸಚಿವರನ್ನು ಭೇಟಿಯಾಗಿ, 2022ರ ಮಾರ್ಚ್ ಗೆ ಜಿ.ಎಸ್.ಟಿ. ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ ಕೋವಿಡ್-19ರಿಂದಾಗಿ ರಾಜ್ಯ ಸರಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಜಿ.ಎಸ್.ಟಿ. ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರಕಾರಗಳ ಸಂಕಷ್ಟ ಬಗೆಹರಿಸುವಂತೆ ಮನವಿ ಮಾಡಿದರು.
ಕಳೆದ ಎರಡು ವರ್ಷಗಳಲ್ಲಿ ಸಾಲದ ಮೂಲಕ ರಾಜ್ಯಗಳಿಗೆ ಜಿ.ಎಸ್.ಟಿ. ಪರಿಹಾರ ಒದಗಿಸಿದಂತೆ, ಮುಂದಿನ ಮೂರು ವರ್ಷಗಳೂ ಇದೇ ಕ್ರಮ ಅನುಸರಿಸುವಂತೆ ಹಾಗೂ ಜಿ.ಎಸ್.ಟಿ. ಸೆಸ್ ಸಂಗ್ರಹದಿಂದ ಈ ಸಾಲ ಮರುಪಾವತಿ ಮಾಡಬಹುದು ಎಂದು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಯಾಣ ಕರ್ನಾಟಕಕ್ಕೆ 5030 ಕೋಟಿ ರೂ. ಅನುದಾನಕ್ಕೆ ಮನವಿ:ಬಸವರಾಜ ಬೊಮ್ಮಾಯಿ