‘ಮಗು ಕುಡಿಯುವ ಹಾಲಿನ ಮೇಲೂ GST ಹಾಕಿದ್ದಾರೆ’

Webdunia
ಗುರುವಾರ, 21 ಜುಲೈ 2022 (19:47 IST)
ನಮಗಂತೂ ಮೋದಿ ತಾಯಿ ಹೃದಯ ಕಂಡಿಲ್ಲ, ಶೋಭಕ್ಕ ಮೋದಿ ತಾಯಿ ಹೃದಯ ಎಲ್ಲಿ ಕಂಡ್ರು ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಕಾಂಗ್ರೆಸ್ ಯುವನಾಯಕ ಮೊಹಮ್ಮದ್ ನಲಪಾಡ್ ವ್ಯಂಗ್ಯವಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು ಮಗು ಕುಡಿಯುವ ಹಾಲಿನ ಮೇಲೂ GST ಹಾಕಿದ್ದಾರೆ. ಮೊಸರು, ಅಕ್ಕಿ ಸೇರಿದಂತೆ ಎಲ್ಲದರ ಮೇಲೂ ಟ್ಯಾಕ್ಸ್ ಹೇರಿದ್ದಾರೆ. ಬರೀ ಅಂಬಾನಿ ಅದಾನಿ ಎರಡು ಕಂಪನಿಗಳಿಗೆ ಸೇರಿದ ಸರ್ಕಾರ ಇದಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನಿರುದ್ಯೋಗಿ ಯುವಕರಿಗೆ ಹೇಗೆ ಕೆಲಸ ಕೊಡಿಸುವುದು. ಅವರನ್ನು ಹೇಗೆ ಮುಂದಕ್ಕೆ ತರುವುದು ಎಂಬುದು ಕಾಂಗ್ರೆಸ್ ಪಕ್ಷದ ಯೋಚನೆಯಾಗಿದೆ ಎಂದ್ರು. ಪಿಕ್ ಪಾಕೆಟ್ ಮಾಡೋದು ಹೇಗೆ, ದುಡ್ಡು ಮಾಡೋದು ಹೇಗೆ ಎಂಬುದು ಬಿಜೆಪಿಯವರ ಯೋಜನೆಯಾಗಿದೆ. ಇದರ ವಿರುಧ್ಧ ನಾವು ಹೋರಾಟ ಮಾಡಲು ಯೋಜನೆ ರೂಪಿಸಿದ್ದೇವೆ. ಕಾಂಗ್ರೆಸ್​​​​ನಲ್ಲಿ ಯಾವುದೇ ಬಣಗಳಿಲ್ಲ, ಸಾಮೂಹಿಕ ನಾಯಕತ್ವದಿಂದ ಚುನಾವಣೆಗೆ ಹೋಗುತ್ತೇವೆ. ಮುಂದಿನ ಚುನಾವಣೆಯಲ್ಲಿ ನಮ್ಮ ಸರ್ಕಾರ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಒಂದಾದರೂ ಜನಪರ ಕಾರ್ಯಕ್ರಮ ತಂದಿದ್ದಾರಾ ಎಂದು ಪ್ರಶ್ನಿಸಿದ ಅವರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments